ಬೆಂಗಳೂರು: ಸಿಎಂ ಸಿದ್ದರಾಮಯ್ಯ 28 ಕೊಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟ ಪಡಿಸಿದರು. ಸಿಎಂ
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯ ಬಳಿಕ ವಿಪಕ್ಷ ನಾಯಕ ಆರ್ ಅಶೋಕ್ ಮಾಡಿದ ಪ್ರಸ್ತಾಪದ ಹಿನ್ನೆಲೆಯಲ್ಲಿ ನಡೆದ ಚರ್ಚೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ : ತನಿಖೆ ನಡೆಸಲು 1 ಲಕ್ಷ ರೂ. ಲಂಚ; ಲೋಕಾಯುಕ್ತ ಪೋಲಿಸ್ ಲೋಕಾ ಬಲೆಗೆ ಸಿಎಂ
“ಸರ್ಕಾರ ಅಷ್ಟೊಂದು ಅಸಹಾಯಕವಾಗಿಲ್ಲ. ಆ ವ್ಯಕ್ತಿಯನ್ನು ದೊಡ್ಡವನು ಮಾಡೋದು ಬೇಡ. ಆ ವ್ಯಕ್ತಿಯ ವಿರುದ್ಧ ಹತ್ತಾರು ಕೇಸ್ ಇದೆ. ಸಮಾಜದಲ್ಲಿ ಇಂತಹ ವ್ಯಕ್ತಿಗಳನ್ನು ಬಿಡಲು ಸಾಧ್ಯವಿಲ್ಲ. ಕಾನೂನು ಚಲಾಯಿಸುತ್ತೇವೆ, ಅವರಿಗೆ ಏನು ಶಿಕ್ಷೆ ಕೊಡಿಸಬೇಕು ಅದನ್ನು ಕೊಡಿಸುತ್ತೇವೆ” ಎಂದರು.
ಇನ್ನೂ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ವಿಧಾನ ಸಭೆಯಲ್ಲೂ ಆಗ್ರಹ ಕೇಳಿಬಂದಿತು. ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡುತ್ತಾ, ಸಿಎಂ 24 ಕೊಲೆ ಮಾಡಿದ್ದಾರೆಂಬ ಆರೋಪ ಬಗ್ಗೆ ಪ್ರಸ್ತಾಪ ಮಾಡಿದರು. ಏನ್ ನಡೀತಿದೆ ರಾಜ್ಯದಲ್ಲಿ, ಸಿಎಂ ಮೇಲೆಯೇ ಆಪಾದನೆ ಮಾಡಿದ್ದಾರೆ. ಹಾಗಾದರೆ ಸಿಎಂ ಕೊಲೆಗಾರರಾ? ಆರೋಪ ಮಾಡಿದವರ ಮೇಲೆ ಕ್ರಮ ಏನು? ನೀವು ಮೌನವಾಗಿದ್ರೆ ಏನ್ ತಿಳ್ಕೊಳ್ಳೋದು ನಾವು? ಅಂತ ಪ್ರಶ್ನೆ ಮಾಡಿದರು.
ಇದನ್ನೂ ನೋಡಿ : Karnataka Legislative Assembly Live – Day 05 – ವಿಧಾನಸಭೆಯ ಮುಂಗಾರು ಅಧಿವೇಶನದ ನೇರ ಪ್ರಸಾರ – ದಿನ 5
