ಬೆಂಗಳೂರು: ಮಳೆಯಿಂದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ 878 ರಸ್ತೆಗಳಲ್ಲಿ ಸುಮಾರು 343.41 ಕಿ.ಮೀ ಉದ್ದದಷ್ಟು ರಸ್ತೆ ಹಾಳಾಗಿದೆ. ಅಲ್ಲದೇ 1,114 ಮನೆಗಳಿಗೆ ಹಾನಿಯಾಗಿದೆ. ಬೆಂಗಳೂರು
ಮಳೆಯಿಂದಾಗಿ ಮರ ಬಿದ್ದು ಪ್ರಾಣ ಕಳೆದುಕೊಂಡ ವ್ಯಕ್ತಿಯ ಕುಟುಂಬದವರಿಗೆ ಬಿಬಿಎಂಪಿಯಿಂದ ಪರಿಹಾರ ವಿತರಿಸಲಾಗಿದೆ. ಇದಲ್ಲದೇ ತಗ್ಗು ಪ್ರದೇಶಗಳಲ್ಲಿ ಪ್ರವಾಹ ತಪ್ಪಿಸಲು ಚರಂಡಿಗಳಿಗೆ ತಡೆ ಗೋಡೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ: ಬೀದಿ ನಾಯಿಗಳ ಮೇಲಿನ ಪ್ರೀತಿಗೆ ಮಿತಿಯಿರಲಿ..
ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರವಾಹದ ಆತಂಕ ಇರುವ 218 ಜಾಗಗಳನ್ನು ಗುರುತಿಸಲಾಗಿದೆ. ಈವರೆಗೂ 169 ಕಡೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲಾಗಿದೆ. ಉಳಿದ 49 ಕಡೆಗಳಲ್ಲಿ ನೀರು ನುಗ್ಗುವುದನ್ನು ತಡೆಯಲು ಯೋಚಿಸಲಾಗಿದೆ ಎಂದಿದ್ದಾರೆ.
ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು ರಸ್ತೆಗಳು ಹಾನಿಗೊಂಡಿವೆ. ಸುಮಾರು 150 ಕಿ.ಮೀ. ರಸ್ತೆ ಹಾಳಾಗಿರುವ ಬಗ್ಗೆ ಬಿಬಿಎಂಪಿಗೆ ವರದಿ ಸಲ್ಲಿಸಲಾಗಿದೆ. ಆದರೆ, ಮನೆಗಳಿಗೆ ನೀರು ನುಗ್ಗಿರುವ ಪ್ರಕರಣಗಳು ದಕ್ಷಿಣ ಹಾಗೂ ಪೂರ್ವ ವಲಯದಲ್ಲಿ ಹೆಚ್ಚಾಗಿವೆ.
ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮಳೆಯಿಂದ ರಸ್ತೆ ಹಾಳಾಗಿರುವ ಕುರಿತು ಹಲವರು ಆಕ್ರೋಶ ಹೊರ ಹಾಕಿದರು. ನಗರದ ಯಾವುದೇ ಭಾಗಕ್ಕೆ ಹೋದರೂ ಗುಂಡಿಯಿಲ್ಲದ ಒಂದೇ ಒಂದು ರಸ್ತೆ ಸಿಗದು. ಅಷ್ಟರ ಮಟ್ಟಿಗೆ ರಸ್ತೆಗಳು ಹಾಳಾಗಿವೆ. ಪ್ರತಿ ದಿನ ಇಂತಹ ರಸ್ತೆಯಲ್ಲಿ ಸಂಚರಿಸುವುದೇ ದುಸ್ತರವಾಗಿದೆ. ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆ ತರಲು ಹೆದರುವಂತಹ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಮಲ್ಲೇಶ್ವರದಿಂದ ದೊಮ್ಮಲೂರಿಗೆ ನಿತ್ಯ ಸಂಚರಿಸುವ ಕೆ.ಕಾವ್ಯಾ ಆಕ್ರೋಶ ಹೊರ ಹಾಕಿದರು.
ಇದನ್ನೂ ನೋಡಿ: ಚುನಾವಣಾ ಆಯೋಗ ಮತ್ತು ವಿಶ್ವಾಸಾರ್ಹತೆ ದೂರ ಬಲು ದೂರ… Janashakthi Media
