43 ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ: ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ 43 ಇಲಾಖೆಗಳಲ್ಲಿ ಒಟ್ಟಾರೆ 2.76 ಲಕ್ಷ (2,76,386) ಹುದ್ದೆಗಳು ಖಾಲಿ ಉಳಿದಿರುವುದಾಗಿ ಸರ್ಕಾರದ ಅಧಿಕೃತ ಮಾಹಿತಿಯೊಂದು ತಿಳಿಸಿದೆ.

ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಲಾಗಿದೆ. ಲಕ್ಷ 

ಇದನ್ನೂ ಓದಿ: ಸುರವರಂ ಸುಧಾಕರ ರೆಡ್ಡಿ ಅವರಿಗೆ ನಮನ

ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 26,168, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು ಖಾಲಿ ಉಳಿದಿದೆ.

ಗ್ರೂಪ್-ಸಿ ವೃಂದದ 96,844 ಹುದ್ದೆಗಳನ್ನು (ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ಸಮನಾಂತರ) ಮತ್ತು ತಾಂತ್ರಿಕ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ವಿವಿಧ ಇಲಾಖೆಗಳ ವಿವಿಧ ವೃಂದಗಳ ಒಟ್ಟಾರೆ 4673 ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಪ್ರಸ್ತಾವ ಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದ್ದಾರೆ.

ಇದನ್ನೂ ನೋಡಿ: ಅಲೆಮಾರಿ ಸಮುದಾಯದ ಹೋರಾಟ | ಓಟಿನ ಲೆಕ್ಕ ನಿಮ್ಮದಣ್ಣ – ಮೋಸ ಮಾಡಿದಿರಲ್ಲಣ್ಣ – ರಾಯಚೂರು ಪಲ್ಲವಿ Janashakthi Media

Donate Janashakthi Media

Leave a Reply

Your email address will not be published. Required fields are marked *