ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ವಿಚಾರಣೆಗೆ ಅರ್ಹವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪೋಕ್ಸೋ
ಪೋಕ್ಸೊ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಪರಿಗಣಿಸಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಂ.ಐ.ಅರುಣ್ ಏಕಸದಸ್ಯ ಪೀಠವು ಸೆಪ್ಟೆಂಬರ್ 17ರಂದು ವಿಚಾರಣೆ ನಡೆಸಿ ಪ್ರಕರಣ ವಿಚಾರಣೆಗೆ ಅರ್ಹವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ವಾದ-ಪ್ರತಿವಾದ ಆಲಿಸಿ CRPC 161 ರಡಿ ಹಲವು ಹೇಳಿಕೆಗಳನ್ನು ಅವಲೋಕಿಸಿ ನ್ಯಾಯಾಲಯ ಈ ಅಭಿಪ್ರಾಯ ಮಂಡಿಸಿದೆ. ಮೇಲ್ನೋಟಕ್ಕೆ ಇದು ವಿಚಾರಣೆಗೆ ಅರ್ಹವಾದ ಪ್ರಕರಣ. ನಿಮ್ಮ ವಾದ ಆಲಿಸಲಾಗುವುದು. ಯಡಿಯೂರಪ್ಪಗೆ ಇಷ್ಟು ವಯಸ್ಸಾಗಿದೆ. ಅನಗತ್ಯವಾಗಿ ಸಮನ್ಸ್ ನೀಡಬಾರದೆಂದು ಕೇಳಿದರೆ ಏನಾದರೂ ಮಾಡಬಹುದು.
ಇದನ್ನೂ ಓದಿ: ಉಳ್ಳಾಲ | ರಸ್ತೆ ಅವ್ಯವಸ್ಥೆ ಖಂಡಿಸಿ ಡಿವೈಎಫ್ಐ ಪ್ರತಿಭಟನೆ, ಶಾಸಕರ ವಿರುದ್ದ ಆಕ್ರೋಶ ಡಿವೈಎಫ್ಐ ಪ್ರತಿಭಟನೆ
ಯಡಿಯೂರಪ್ಪ ಪ್ರತಿ ಪಕ್ಷದಲ್ಲಿದ್ದಾರೆ. ಅನಗತ್ಯವಾಗಿ ಕಿರುಕುಳ ನೀಡುತ್ತಾರೆಂದು ಹೇಳಬಹುದು. ಕಿರುಕುಳ ತಪ್ಪಿಸಿ ನ್ಯಾಯಯುತ ವಿಚಾರಣೆಗೆ ಸಂಬಂಧಿಸಿದಂತೆ ರಕ್ಷಣೆ ಮಾಡಬಹುದು. ಅಂತಹ ಅಂಶವನ್ನು ಉಲ್ಲೇಖಿಸಿ, ಮೆರಿಟ್ ಮೇಲೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ಮೌಖಿಕವಾಗಿ ಹೇಳಲಾಗಿದೆ.
ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯೊಂದೇ ಆರೋಪಿಗೆ ಶಿಕ್ಷೆ ವಿಧಿಸಲು ಕೆಲವೊಮ್ಮೆ ಸಾಕಾಗುತ್ತದೆ. ಸಂತ್ರಸ್ತೆಯ ಹೇಳಿಕೆ ಪರಿಶೀಲನೆಗೆ ಒಳಪಡಿಸಬೇಕಿದೆ. ವಿಚಾರಣೆಯಲ್ಲಿಆಕೆಯ ತಾಯಿಗೆ ದೂರು ನೀಡುವುದು ಹವ್ಯಾಸವಾಗಿತ್ತು, ಆಕೆ ಇಷ್ಟೆಲ್ಲಾ ಪ್ರಕರಣ ದಾಖಲಿಸಿದ್ದಾರೆ.
ಆಕೆಯ ಮೇಲೆ ಇಷ್ಟೆಲ್ಲಾ ಕ್ರಿಮಿನಲ್ ಪ್ರಕರಣ ಇವೆ, ಈ ಹುಡುಗಿಯೇ ಎರಡು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆಂದು ಹೇಳಲಾಗುತ್ತಿದೆ. ಅವರು ಏಕೆ ಅರ್ಜಿದಾರರ ಮನೆಗೆ ಬಂದಿದ್ದರು, ಯಡಿಯೂರಪ್ಪ ಸಂತ್ರಸ್ತೆಗೆ ಏಕೆ ದುಡ್ಡು ನೀಡಲು ಮುಂದಾಗಿದ್ದರು? ಇವೆಲ್ಲವೂ ವಿಚಾರಣೆಗೆ ಅರ್ಹವಾದ ಪ್ರಕರಣವನ್ನಾಗಿಸಿವೆ. ಅದಕ್ಕೆ ಕನಿಷ್ಠ ಐದು ದಿನಗಳ ಮಧ್ಯಾಹ್ನದ ಸಂಪೂರ್ಣ ಕಲಾಪ ವ್ಯಯಿಸಬೇಕಾಗುತ್ತದೆ ಎಂದು ಹೇಳಿದೆ.
ಬಿಎಸ್ವೈ ಪರ ವಕೀಲ ಸಂದೀಪ್ ಪಾಟೀಲ್ ಮಾತನಾಡಿ ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬುದು ಅರ್ಥವಾಗುತ್ತದೆ. ಈ ಕುರಿತು ಅರ್ಜಿದಾರರೊಂದಿಧಿಗೆ ಚರ್ಚಿಸಿ, ವಿಚಾರ ತಿಳಿಸಲಾಗುವುದು ಎಂದು ಹೇಳಿದ್ದಾರೆ. ಹಾಗಾಗಿ, ನ್ಯಾಯಾಲಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | “ಕೊಂದವರು ಯಾರು ?” ಮಹಿಳಾ ಸಂಘಟನೆಗಳಿಂದ ಅಭಿಯಾನ Janashakthi Media
