ಜೊಮ್ಯಾಟೊ ಡೆಲಿವರಿ ವ್ಯಕ್ತಿಯನ್ನು ಹಿಗ್ಗಾ ಮುಗ್ಗಾ ಥಳಿಸಿದ ಪುಂಡರ ಗುಂಪು

ಬೆಂಗಳೂರು: ನಗರದಲ್ಲಿ ಪುಂಡರ ಹಾವಳಿ ಮಿತಿ ಮೀರುತ್ತಿದೆ. ಪುಂಡರ ಗುಂಪೊಂದು ಜೊಮ್ಯಾಟೊ ಡೆಲಿವರಿ ವ್ಯಕ್ತಿ ಮೇಲೆ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಶೋಭಾ ಥಿಯೇಟರ್ ಬಾಪೂಜಿನಗರ ಬಳಿ ಜರುಗಿದೆ.

ಕಳೆದೆರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ಷುಲ್ಲಕ ಕಾರಣಕ್ಕೆ ಕೈಗೆ ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆದಿದೆ. ಘಟನೆಗೆ‌ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನಕ್ಕೆ ವಿರೋಧ; ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಹಲ್ಲೆ ಸಂಭಂದ ಯಾವುದೇ ಪ್ರಕರಣ ಸಹ ದಾಖಲಾಗಿಲ್ಲ. ಸದ್ಯ ವಿಡಿಯೋ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ನೋಡಿ: ನಾಲ್ಕು ದಶಕಗಳಿಂದ ಧರ್ಮಸ್ಥಳದಲ್ಲಿ ಕೊಲೆ, ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿವೆ – ಡಾ. ಕೆ.ಪ್ರಕಾಶ್‌ Janashakthi

Donate Janashakthi Media

Leave a Reply

Your email address will not be published. Required fields are marked *