ಎಂ.ಕೆ.ಹುಬ್ಬಳ್ಳಿ | ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯ ಚುನಾವಣೆ ಸೆ.28ರಂದು ಮತದಾನ

ಎಂ.ಕೆ.ಹುಬ್ಬಳ್ಳಿ: ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯ ಚುನಾವಣೆ15 ಸ್ಥಾನಗಳಿಗೆ ಸೆ.28ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 4ರವರೆಗೆ ಮತದಾನ ನಡೆಯಲಿದೆ. ಎಂ.ಕೆ.ಹುಬ್ಬಳ್ಳಿ

ಇದನ್ನೂ ಓದಿ: ಕಲಬುರಗಿಯಲ್ಲಿ ನಿರಂತರ ಮಳೆ: 400ಕ್ಕೂ ಹೆಚ್ಚು ಜನರ ಸ್ಥಳಾಂತರ

ಮತದಾನಕ್ಕೆ ಕಾರ್ಖಾನೆ ಗುರುತಿನ ಚೀಟಿ ಜೊತೆಗೆ ಆಧಾರ್‌ ಕಾರ್ಡ್, ವೋಟರ್‌ ಐಡಿ, ಪಾನ್‌ ಕಾರ್ಡ್, ಪಾಸ್‌ಪೋರ್ಟ್, ಚಾಲನಾ ಪರವಾನಗಿ ಯಾವುದಾದರೂ ಒಂದನ್ನು ತರಬೇಕು ಎಂದು ಚುನಾವಣಾಧಿಕಾರಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪ್ರಭಾವತಿ ಫಕೀರಪುರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಟ್ಟು 16,903 ಸದಸ್ಯರಿಗೆ ಮತದಾನಕ್ಕೆ ಅವಕಾಶವಿದೆ. 44 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿದ್ದಾರೆ.  34 ಮತಗಟ್ಟೆ ಮತ್ತು ಸ್ಲಿಪ್ ಕೌಂಟರ್‌ಗಳನ್ನು ನಿರ್ಮಿಸಲಾಗಿದ್ದು, 170 ಪೋಲಿಂಗ್‌ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಮತಎಣಿಕೆಗೆ 45 ಟೇಬಲ್ ಹಾಕಲಾಗಿದ್ದು, ಒಟ್ಟು 225 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ’ ಎಂದರು.

ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ, ಕಿತ್ತೂರು ಪ್ರಾಧಿಕಾರ ಆಯುಕ್ತರ ಕಚೇರಿ ಅಧಿಕಾರಿ ಮಂಜುನಾಥ ಅಂಗಡಿ ಇದ್ದರು.

ಇದನ್ನೂ ನೋಡಿ : ಧರ್ಮಸ್ಥಳ ಪ್ರಕರಣ | ಅಸಹಜ ಸಾವುಗಳಿಗೂ, ಭೂ ಕಬಳಿಕೆ, ಮೈಕ್ರೋಫೈನಾನ್ಸ್‌ಗೂ ಲಿಂಕ್‌ ಇದೆಯಾ?

Donate Janashakthi Media

Leave a Reply

Your email address will not be published. Required fields are marked *