ಧಾರವಾಡ: ನಗರದಲ್ಲಿ ಪೊಲೀಸ್ ಕಾನ್ಸ್ಟೆಬಲ್, ಸಹಿತ ವಿವಿಧ ಹುದ್ದೆಗಳ ನೇಮಕಾತಿಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯವರು (ಎಕೆಎಸ್ಎಸ್ಎ) ಪ್ರತಿಭಟನೆ ನಡೆಸಿದರು.
ಜುಬಿಲಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಹುದ್ದೆಗಳ ಭರ್ತಿಗೆ ಆಗ್ರಹಿಸಿ ಘೋಷಣೆ ಕೂಗಿದರು.
ಇದನ್ನೂ ಓದಿ: ಕರ್ತವ್ಯ ಲೋಪ: 5 ಪೊಲೀಸ್ ಸಿಬ್ಬಂದಿಗಳು ಅಮಾನತು
ಕೆಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಹಲವು ಉದ್ಯೋಗಾರ್ಥಿಗಳು ವಯೋಮಿತಿ ಮೀರಿ ಉದ್ಯೋಗದಿಂದ ವಂಚಿತರಾಗುವಂತಾಗಿದೆ ಎಂದು ಅಳಲು ತೋಡಿಕೊಂಡರು.
ಪ್ರತಿಭಟನಾಕಾರರು ಜುಬಿಲಿ ವೃತ್ತದಲ್ಲಿ ಧರಣಿ ಕುಳಿತಿದ್ದರಿಂದ ಕೆಲಕಾಲ ಸಂಚಾರಕ್ಕೆ ತೊಡಕಾಗಿತ್ತು.
ಇದನ್ನೂ ನೋಡಿ: ಧರ್ಮಸ್ಥಳ :ಅಧಿಕ ಬಡ್ಡಿ, ಸಾಲ ವಸೂಲಿ ನೆಪದಲ್ಲಿ ಕಿರುಕುಳ : ನೂರಾರು ಜನರು ಆತ್ಮಹತ್ಯೆ – ಜಯಂತ್ ಟಿ
