ಬೆಂಗಳೂರು: ಸೆಪ್ಟೆಂಬರ್ 25 ತಡರಾತ್ರಿ 2.30ರ ಸುಮಾರಿಗೆ ಮಲ್ಲೇಶ್ವರದ ಪೈಪ್‌ಲೈನ್ ರಸ್ತೆಯಲ್ಲಿರುವ ಪೀಠೊಪಕರಣ ಮಳಿಗೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಪೀಠೊಪಕರಣಗಳು ಸುಟ್ಟು ಹಾನಿಯಾಗಿವೆ ಎಂದು ತಿಳಿದು ಬಂದಿದೆ.
2 ಅಂತಸ್ತಿನಲ್ಲಿರುವ ಮಳಿಗೆಯ ನೆಲ ಮಾಳಿಗೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿಯ ಕೆನ್ನಾಲಿಗೆ ಕ್ಷಣ ಮಾತ್ರದಲ್ಲಿ ಇಡೀ ಮಳಿಗೆಗೆ ಹರಡಿದೆ. ಪರಿಣಾಮ ಮಳಿಗೆಯ ಮೊದಲ ಅಂತಸ್ತಿನಲ್ಲಿ ಮಲಗಿದ್ದ 5ಕ್ಕೂ ಹೆಚ್ಚು ಕಾರ್ಮಿಕರು ಹೊರಗೆ ಓಡಿಹೋಗಿ ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ. ಇನ್ನು ಪೀಠೊಪ ಕರಣಗಳು ಹೊತ್ತಿ ಉರಿದಿತ್ತು.
ಇದನ್ನೂ ಓದಿ: ಬೆಂಗಳೂರು | ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಗುಂಡಿ ಮುಕ್ತ ರಸ್ತೆಗಳನ್ನಾಗಿಸಲು – ಮುಖ್ಯಮಂತ್ರಿ ನಿರ್ದೇಶನ
ಕೂಡಲೇ ಸಿಬ್ಬಂದಿ ನೀಡದ ಮಾಹಿತಿ ಆಧರಿಸಿ 13 ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಯು 4 ಗಂಟೆಗೂ ಅಧಿಕ ಹೊತ್ತು ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮಳಿಗೆಗೆ ಹೊಂದಿಕೊಂಡಂತಿ ರುವ ಕೆಲವು ಮನೆಗಳಿಗೆ ಬೆಂಕಿಯ ಕೆನ್ನಾಗಿ ಆವರಿಸಿ, ಅಲ್ಲಿನ ಕಿಟಕಿ ಬಾಗಿಲುಗಳಿಗೆ ಹಾನಿಯಾಗಿದೆ.
ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಸಾಧ್ಯತೆ:ಮಳಿಗೆ ಯಲ್ಲಿ ಪೂಜಾ ಮಂಟಪಗಳು, ಮರದ ಪೀಠೊಪಕರಣ ಗಳನ್ನು ತಯಾರಿಸಿ ಗ್ರಾಹಕರಿಗೆ ಮಾರಾಟ ಮಾಡಲಾಗುತಿತ್ತು. ಬೆಂಕಿ ಅನಾಹುತದಲ್ಲಿ ಪೀಠೊಪಕರಣಗಳು ಸುಟ್ಟು ಹೋಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮಳಿಗೆಯ ನೆಲ ಅಂತಸ್ತಿನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ. ಅಗ್ನಿಶಾಮಕ ಸಿಬ್ಬಂದಿಯು ಪರಿಶೀಲನೆ ಮಾಡಿ ವರದಿ ನೀಡಿದ ಬಳಿಕ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬರಲಿದೆ. ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಮೈಸೂರು ದಸರಾ | ʻನಾವು ಹಗೆಗಳಿಂದ ಅಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದುʼ- ಬಾನು ಮುಷ್ತಾಕ್
