ಬೆಂಗಳೂರು: ಹೊರಗುತ್ತಿಗೆ ಆಧಾರದಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ. ಬೆಂಗಳೂರು
ಇದನ್ನೂ ಓದಿ : BJP ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ಸಂವಿಧಾನದ ಮೂಲ ಆಶಯದ ಮೇಲೆ ದಾಳಿ: ಅಖಿಲೇಶ್
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ‘ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರು ಹಾಗೂ ಶುಶ್ರೂಷಕರಿಗೆ ಹೆರಿಗೆ ಭತ್ಯೆಯನ್ನೂ ನೀಡುತ್ತಿಲ್ಲ. ಹೆರಿಗೆ ರಜೆ ಮುಗಿಸಿಕೊಂಡು ಕರ್ತವ್ಯ ನಿರ್ವಹಿಸಲು ಬರುವ ಸಿಬ್ಬಂದಿಯನ್ನು ಕೆಲಸಕ್ಕೂ ನೇಮಿಸಿಕೊಳ್ಳುತ್ತಿಲ್ಲ ಎಂದು ಸುವರ್ಣ ಕರ್ನಾಟಕ ಶುಶ್ರೂಷಾಧಿಕಾರಿಗಳ ಸಂಘವು ಆಯೋಗಕ್ಕೆ ಮನವಿ ಸಲ್ಲಿಸಿದೆ. ಮಹಿಳಾ ನೌಕರರಿಗೆ ವೇತನಸಹಿತ ಹೆರಿಗೆ ರಜೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ನೋಡಿ : ನಾಟಕ | “ಪ್ಲಾಸ್ಟಿಕ್ ಅಸುರ” Janashakthi Media
