ಮುಂಬೈ : ಅನಿಲ್ ಡಿ ಅಂಬಾನಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಡುವಣ ಪ್ರಕರಣ ತಮ್ಮ ಸಾಲದ ಬ್ಯಾಂಕ್ ಖಾತೆಗಳನ್ನು ವಂಚನೆ ವರ್ಗಕ್ಕೆ ಸೇರಿಸಿದ್ದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ನಿರ್ಣಯ ಪ್ರಶ್ನಿಸಿ ಉದ್ಯಮಿ ಅನಿಲ್ ಅಂಬಾನಿ ಸಲಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮುಂಬೈ
ಇದನ್ನೂ ಓದಿ : ಸರ್ಕಾರಿ ಆಸ್ಪತ್ರೆ ಐಸಿಯು ವಾರ್ಡ್ನಲ್ಲಿ ಬೆಂಕಿ ಅವಘಡ; 8 ಮಂದಿ ಸಾವು
ಕಾರ್ಯವಿಧಾನ ನ್ಯಾಯಯುತವಾಗಿಲ್ಲ ಎಂಬ ಅಂಬಾನಿ ಅವರ ವಾದ ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ನೀಲಾ ಗೋಖಲೆ ಅವರಿದ್ದ ವಿಭಾಗೀಯ ಪೀಠ ಎಸ್ಬಿಐ ಕೈಗೊಂಡ ಕ್ರಮವನ್ನು ಎತ್ತಿಹಿಡಿದಿದೆ. ತೀರ್ಪಿನ ಪ್ರತಿ ಇನ್ನಷ್ಟೇ ದೊರೆಯಬೇಕಿದೆ.
ಖಾತೆಯನ್ನು ವಂಚನೆ ವರ್ಗಕ್ಕೆ ಸೇರಿಸಿದ್ದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿರ್ಧಾರದ ವಿರುದ್ಧವೂ ಅನಿಲ್ ಅಂಬಾನಿ ಅರ್ಜಿ ಸಲ್ಲಿಸಿದ್ದರು. ಆದರೆ, ಅದೇ ಪೀಠ ತಡೆಯಾಜ್ಞೆ ನೀಡಿರಲಿಲ್ಲ. ಬದಲಿಗೆ ಆರ್ಬಿಐ ಸಂಪರ್ಕಿಸುವಂತೆ ಸೂಚಿಸಿತ್ತು.
ಅನಿಲ್ ಅಂಬಾನಿ ಪರವಾಗಿ ಹಿರಿಯ ವಕೀಲರಾದ ಡೇರಿಯಸ್ ಖಂಬಾಟಾ ಮತ್ತು ಪ್ರತೀಕ್ ಸೆಕ್ಸಾರಿಯಾ ವಾದ ಮಂಡಿಸಿದ್ದರು. ಎಸ್ಬಿಐ ಅನ್ನು ಹಿರಿಯ ವಕೀಲ ಆಸ್ಪಿ ಚಿನೋಯ್ ಹಾಗೂ ತಂಡ ಪ್ರತಿನಿಧಿಸಿತ್ತು.
ಇದನ್ನೂ ನೋಡಿ : ನಾಟಕ | “ಪ್ಲಾಸ್ಟಿಕ್ ಅಸುರ” Janashakthi Media
