ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರತ್ತ ವಕೀಲ ಶೂ ಎಸೆದಿರುವ ಘಟನೆ ಸೋಮವಾರ ನಡೆದಿದೆ.
ಇದನ್ನೂ ಓದಿ : BJP ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ಸಂವಿಧಾನದ ಮೂಲ ಆಶಯದ ಮೇಲೆ ದಾಳಿ: ಅಖಿಲೇಶ್
‘ಇದಕ್ಕೆಲ್ಲ ವಿಚಲಿತರಾಗದಿರಿ. ನಾನೂ ವಿಚಲಿತಗೊಳ್ಳುವುದಿಲ್ಲ. ಇಂತಹ ವಿಚಾರಗಳು ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎನ್ನುವ ಮೂಲಕ ದಿಟ್ಟತನ ಪ್ರದರ್ಶಿಸಿದ್ದಾರೆ ಎಂದು ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.
ಸಿಜೆಐ ನೇತೃತ್ವದ ಪೀಠದ ಎದುರು ವಕೀಲರು ಪ್ರಕರಣಗಳ ಕುರಿತು ಪ್ರಸ್ತಾಪಿಸುತ್ತಿದ್ದಾಗ ಘಟನೆ ನಡೆದಿದೆ. ಆದಾಗ್ಯೂ, ಇದರಿಂದ ಕುಗ್ಗದ ನ್ಯಾ. ಗವಾಯಿ ಅವರು, ಪ್ರಸ್ತಾವನೆ ಮುಂದುವರಿಸುವಂತೆ ವಕೀಲರಿಗೆ ಹೇಳಿದ್ದಾರೆ.
ದಾಳಿಗೆ ಯತ್ನಿಸಿದ ವಕೀಲ ನ್ಯಾಯಾಲಯದ ಆವರಣದಿಂದ ಹೊರನಡೆಯುವ ವೇಳೆ, ‘ಸನಾತನ ಧರ್ಮದ ಅಪಮಾನ ಸಹಿಸುವುದಿಲ್ಲ’ ಎಂದು ಕೂಗಿರುವುದಾಗಿಯೂ ಉಲ್ಲೇಖಿಸಲಾಗಿದೆ.
ಇದನ್ನೂ ನೋಡಿ : ನಾಟಕ | “ಪ್ಲಾಸ್ಟಿಕ್ ಅಸುರ” Janashakthi Media
