ಕಲಬುರಗಿ |ಸಿಜೆಐ ಗವಾಯಿ ಮೇಲೆ ಹಲ್ಲೇ ಖಂಡಿಸಿ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

ಕಲಬುರಗಿ: ದಲಿತ ಹಕ್ಕುಗಳ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು  ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಖಂಡಿಸಿ ನಗರದ ತಿಮ್ಮಪುರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದವು. ಕಲಬುರಗಿ

ಇದನ್ನೂ ಓದಿ : ಬೆಂಗಳೂರು | ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಿ

ಸಿಜೆಐ ಗವಾಯಿ ಅವರ ಮೇಲೆ ತೆರೆದ ನ್ಯಾಯಾಲಯದ ಕೋಣೆಯಲ್ಲಿ ಶೂ ಎಸೆಯುವ ಪ್ರಯತ್ನ ಮಾಡಲಾಗಿದೆ. ಆರೋಪಿಯು ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ ಎಂಬುದು ಅತ್ಯಂತ ಆಘಾತಕಾರಿ ಮತ್ತು ಶೋಚನೀಯ ಘಟನೆ.

ಜಾತಿವಾದಿ, ಮನುವಾದಿ ಮತ್ತು ಕೋಮುವಾದಿ ವಿಚಾರಗಳನ್ನು ಉತ್ತೇಜಿಸುವ ಬಿಜೆಪಿ ಮುಖ್ಯಮಂತ್ರಿಗಳು, ಸಚಿವರು ಮತ್ತು ನಾಯಕರ ಇತ್ತೀಚಿನ ಹೇಳಿಕೆಗಳು ಅಂತಹ ದುಷ್ಕೃತ್ಯಗಳಿಗೆ ಧೈರ್ಯ ತುಂಬಿವೆ. ಈ ಘಟನೆಯು ಹಿಂದುತ್ವ ಕೋಮುವಾದಿ ಶಕ್ತಿಗಳು ಸಮಾಜಕ್ಕೆ ಮನುವಾದಿ ಮತ್ತು ಕೋಮು ವಿಷವನ್ನು ತುಂಬಿರುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಇದು ಸಂಘ ಪರಿವಾರದ ಅಸಹಿಷ್ಣುತೆ ಮತ್ತು ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗದ ಯಾವುದೇ ಅಭಿಪ್ರಾಯವನ್ನು ಸ್ವೀಕರಿಸಲು ಇಷ್ಟವಿಲ್ಲದಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನೂ ನೋಡಿ : ನಾಟಕ | “ಪ್ಲಾಸ್ಟಿಕ್‌ ಅಸುರ” Janashakthi Media

Donate Janashakthi Media

Leave a Reply

Your email address will not be published. Required fields are marked *