ಧರ್ಮಸ್ಥಳ ಪ್ರಕರಣ: ಒಂದೇ ಜಾಗದಲ್ಲಿ 10 ಮೃತದೇಹ ಹೂತಿದ್ದಾಗಿ ದೂರುದಾರ ಸ್ಫೋಟಕ ಹೇಳಿಕೆ

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಅನಾಥ ಶವ ಹೂತಿಟ್ಟ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳ ಮುಂದೆ ಹೇಳದೆ ಇದ್ದ ಮುಖ್ಯ ವಿಚಾರವನ್ನು ಅನಾಮಿಕ ದೂರುದಾರ ಅಲಿಯಾಸ್‌ ಚಿನ್ನಯ್ಯ ನ್ಯಾಯಾಲಯದ ಮುಂದೆ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಧರ್ಮಸ್ಥಳ

ಚಿನ್ನಯ್ಯ ಕೋರ್ಟ್‌ ಮುಂದೆ ತಾನು ಒಂದೇ ಜಾಗದಲ್ಲಿ ಹತ್ತು ಮೃತದೇಹ ಹೂತಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಯಾವ ಜಾಗದಲ್ಲಿ, ಎಲ್ಲಿ, ಯಾವಾಗ ಎಂದು ಮಾತ್ರ ಹೇಳಿಲ್ಲ. ಎಸ್‌ಐಟಿ ಮುಂದೆ ಕೊಡದ ಮಾಹಿತಿ ಕೋರ್ಟ್‌ ಮುಂದೆ ಕೊಟ್ಟಿದ್ದಕ್ಕೆ ಅಧಿಕಾರಿಗಳು ಶಾಕ್‌ ಆಗಿದ್ದಾರೆ. ಚಿನ್ನಯ್ಯನ ಮತ್ತೊಂದು ವರಸೆ ತನಿಖಾಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಹತ್ತು ಶವ ಹೂತಿದ್ನಾ ಚಿನ್ನಯ್ಯ?

ಬೆಳ್ತಂಗಡಿ ಕೋರ್ಟ್‌ನಲ್ಲಿ ಬಿಎನ್‌ಎಸ್ 183 ಅಡಿ ಹೇಳಿಕೆ ದಾಖಲಿಸುವ ವೇಳೆ ಒಂದೇ ಜಾಗದಲ್ಲಿ ಹತ್ತು ಶವ ಹೂತಿರುವುದಾಗಿ ಹೇಳಿಕೆ ಕೊಟ್ಟಿದ್ದಾನೆ. ಹತ್ತು ಶವ ಎಲ್ಲಿ ಊಳಲಾಗಿದೆ ಎಂದು ಆಳವಾದ ತನಿಖೆ ನಡೆಸಲು ಎಸ್‌ಐಟಿ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿರುವುದರಿಂದ, ಅಲ್ಲೇ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಈ ಹೇಳಿಕೆಯ ಸತ್ಯಾಸತ್ಯತೆ ಮತ್ತು ಹಿಂದಿನ ಹೇಳಿಕೆಗಳಿಗೂ ಇದಕ್ಕೂ ಇರುವ ವ್ಯತ್ಯಾಸಗಳ ಬಗ್ಗೆ ಎಸ್‌ಐಟಿ ತನಿಖೆ ಮುಂದುವರಿಸಲಿದೆ.

ಇದನ್ನೂ ಓದಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ: ಮತದಾರರಿಗೆ ಮಾಹಿತಿಗಳೇನೇನು?

ಧರ್ಮಸ್ಥಳದಲ್ಲಿ ಅನಾಥ ಶವಗಳನ್ನು ಮರಣೋತ್ತರ ಪರೀಕ್ಷೆ ಇಲ್ಲದೆ ಹೂಳಲಾಗಿದೆ ಎಂಬ ಪ್ರಕರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ತನಿಖೆ ನಿರ್ಣಾಯಕ ಹಂತ ತಲುಪಿದೆ. ಆದರೆ, ಚಿನ್ನಯ್ಯ ಮತ್ತೊಂದು ಹೇಳಿಕೆ ಕೊಟ್ಟಿರುವ ಕಾರಣ ಮೊಹಂತಿ ನೇತೃತ್ವದ ತಂಡ ತನಿಖೆ ಚುರುಕುಗೊಳಿಸುತ್ತದೆ ಎನ್ನಲಾಗಿದೆ.

ಶಿವಮೊಗ್ಗ ಜೈಲಲ್ಲೇ ವಿಚಾರಣೆ

ಶಿವಮೊಗ್ಗ ಜೈಲಿನಲ್ಲಿರುವ ಸಾಕ್ಷಿದಾರನನ್ನು ವಿಚಾರಣೆ ನಡೆಸಲು ಎಸ್‌ಐಟಿ ಪೊಲೀಸರು ಅನುಮತಿ ಕೋರಿದ್ದಾರೆ. ಕೊಲೆ ಮತ್ತು ಲೈಂಗಿಕ ದೌರ್ಜನ್ಯ ನಡೆದಿರುವ 10 ಮೃತದೇಹಗಳನ್ನು ಹೂತಿರುವುದಾಗಿ ಸಾಕ್ಷಿದಾರ ಹೇಳಿಕೆ ನೀಡಿದ್ದ. ಆದರೆ, ನಂತರದ ತನಿಖೆಯಲ್ಲಿ ಶವಗಳನ್ನು ಕಾನೂನುಬದ್ಧವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂಬುದು ಬಹಿರಂಗವಾಗಿದೆ. ಈ ವ್ಯತಿರಿಕ್ತ ಹೇಳಿಕೆಗಳ ಹಿನ್ನೆಲೆಯಲ್ಲಿ, ಎಸ್‌ಐಟಿ ಸಾಕ್ಷಿದಾರನನ್ನು ಮತ್ತೆ ವಿಚಾರಣೆ ನಡೆಸಲು ನಿರ್ಧರಿಸಿದೆ.

ಸಾಕ್ಷಿದಾರನ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿರುವ ಕಾರಣದಿಂದಾಗಿ, ಎಸ್‌ಐಟಿ ಪೊಲೀಸರು ಆತನ ಹೇಳಿಕೆಗಳನ್ನು ಮರುಪರಿಶೀಲನೆ ಮಾಡಲು ಮುಂದಾಗಿದ್ದಾರೆ. ಸಾಕ್ಷಿದಾರನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯುವ ಬದಲು, ಆತ ಪ್ರಸ್ತುತ ಇರುವ ಶಿವಮೊಗ್ಗ ಜೈಲಿಗೆ ಭೇಟಿ ನೀಡಿ ವಿಚಾರಣೆ ನಡೆಸಲು ಅನುಮತಿ ಕೇಳಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಗಿರೀಶ್‌ ಮಟ್ಟಣ್ಣನವರ್‌ ವಿಚಾರಣೆ

ಗಿರೀಶ್ ಮಟ್ಟಣ್ಣವರ್ ವಿರುದ್ಧ ಬುರುಡೆ ಪ್ರಕರಣದಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸದ್ಯ ಆ ಪ್ರಕರಣದ ವಿಚಾರಣೆ ಆರಂಭವಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಮತ್ತು ರೌಡಿಶೀಟರ್ ಮದನ್ ಬುಗುಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರೌಡಿಶೀಟರ್ ಮದನ್ ಬುಗುಡಿ ತನ್ನ ವಕೀಲರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.

ವೀರೇಂದ್ರ ಹೆಗಡೆಯವರ ಬಳಿ ಕ್ಷಮೆ ಕೇಳ್ತೇನೆ

ಮುಂದಿನ ವಾರ ಧರ್ಮಸ್ಥಳಕ್ಕೆ ಹೋಗಬೇಕು ಯಾರದ್ದೋ ಮಾತು ಕೇಳಿ ತಪ್ಪು ಮಾಡಿದ್ದೇನೆ. ವೀರೇಂದ್ರ ಹೆಗಡೆಯವರನ್ನ ಭೇಟಿ ಮಾಡಿ ಕ್ಷಮೆ ಕೇಳಬೇಕು. ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ ಯಾರ ಸಹವಾಸ ಬೇಡ. ಅರವತ್ತು ವರ್ಷದಲ್ಲಿ ಕಪ್ಪು ಚುಕ್ಕೆ ಇರಲಿಲ್ಲ. ಈ ಪ್ರಕರಣವೇ ನನ್ನ ಜೀವನದ ಕಪ್ಪುಚುಕ್ಕೆ ಅವರು ಹಾಳಾಗದೆ ನನ್ನ ಜೀವನವನ್ನು ಹಾಳುಮಾಡಿದ್ದಾರೆ ಎಂದು ಸುಜಾತ್‌ ಭಟ್‌ ಖಾಸಗಿ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟಿದ್ದಾರೆ.

ಮಂಜುನಾಥ ಸ್ವಾಮಿ ನೋಡಿಕೊಳ್ತಾರೆ

ನನ್ನ ಮೇಲೆ ಯಾಕಿಷ್ಟು ದ್ವೇಷ ಗೊತ್ತಾಗುತ್ತಿಲ್ಲ. ನಾನು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಮಾಡಿಲ್ಲ. ಆದರೂ ನನ್ನ ಮೇಲೆ ಶತೃತ್ವ ಯಾಕೆ? ನನ್ನನ್ನು ಮಂಜುನಾಥ ಅಣ್ಣಪ್ಪ ಸ್ವಾಮಿ ನೋಡಿಕೊಳ್ಳುತ್ತಾರೆ ಎಂದು ಈ ಹಿಂದೆ ಸುದ್ದಿಗೋಷ್ಠಿ ನಡೆಸಿ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದರು.

ಇದನ್ನೂ ನೋಡಿ: KIADB | ಸುವರ್ಣ ಚಾನೆಲ್ ರಾಜೀವ್‌ ಚಂದ್ರಶೇಖರ್ ಕುಟುಂಬದ ಹಗರಣಗಳ ಬಗ್ಗೆ ದೂರು ದಾಖಲಿಸಿದ ವಕೀಲ Janashakthi Media

Donate Janashakthi Media

Leave a Reply

Your email address will not be published. Required fields are marked *