ರಮೇಶ್ ಕತ್ತಿಯ ಬಂಧನಕ್ಕೆ ಆಗ್ರಹ; ಇಲ್ಲದಿದ್ದರೆ ಅಕ್ಟೋಬರ್ 24ರಂದು ಬೆಳಗಾವಿ ಬಂದ್‌!

ಬೆಳಗಾವಿ: ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಜಿಲ್ಲೆಯ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬಂಧನ

ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್‌ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ ಮಾತ್ರವಲ್ಲದೇ ಕೊಪ್ಪಳ, ರಾಯಚೂರಿನಲ್ಲೂ ಇದೇ ರೀತಿಯ ಹೋರಾಟ ನಡೆದಿದೆ.

ಇದನ್ನೂ ಓದಿ: ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ: 17 ಜನರ ವಿರುದ್ಧ ಪ್ರಕರಣ ದಾಖಲು

ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ರಮೇಶ್ ಕತ್ತಿಯ ತಕ್ಷಣದ ಬಂಧನಕ್ಕೆ ಆಗ್ರಹಿಸಲಾಯಿತು. ಅವರ ಹೇಳಿಕೆಯಿಂದ ಸಮಾಜದ ಗೌರವಕ್ಕೆ ಧಕ್ಕೆಯಾಗಿದ್ದು, ಜನಮಾನಸದಲ್ಲಿ ತೀವ್ರ ನೋವು ಉಂಟಾಗಿದೆ ಎಂದು ಜಿಲ್ಲಾಧ್ಯಕ್ಷ ರಾಜಶೇಖರ ತಳವಾರ ತಿಳಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರುವ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ.

ಶೋಷಿತ ಸಮುದಾಯ ಹೀಯಾಳಿಸಿದ ಅವರಿಗೆ ಮುಂದೆ ಪ್ರತ್ಯುತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ಕೊಟ್ಟರು. ರಮೇಶ್ ಕತ್ತಿ ನೀಡಿದ ಹೇಳಿಕೆಯಿಂದ ನಮಗೆ ನೋವಾಗಿದೆ. ಬೇರೆ ಬೇರೆ ಸಮುದಾಯಗಳ ಮಧ್ಯೆ ಸಂಘರ್ಷ ತಲೆದೋರುವ ಸಾಧ್ಯತೆ ಇದೆ. ತಕ್ಷಣವೇ ಅವರನ್ನು ಬಂಧಿಸಬೇಕು. ಇಲ್ಲದಿದ್ದರೆ ವಾಲ್ಮೀಕಿ ಸಮುದಾಯ ಸೇರಿದಂತೆ ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳಿಂದ ಅ.24ರಂದು ಬೆಳಗಾವಿ ಬಂದ್‌ಗೆ ಕರೆ ಕೊಡಲಾಗತ್ತೆ ಎಂದು ರಾಜಶೇಖರ ತಳವಾರ ತಿಳಿಸಿದರು.

ಇದನ್ನೂ ನೋಡಿ: ನಿರಂಜನ | ಶತಮಾನದ ಮರುಓದು” – ಅಕ್ಟೋಬರ್ 31 ಸಮಾರೋಪ ಕಾರ್ಯಕ್ರಮ Janashakthi Media

Donate Janashakthi Media

Leave a Reply

Your email address will not be published. Required fields are marked *