ಶ್ರೀಕಾಕುಲಂ |ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ 7 ಜನ ಮೃತ

ಶ್ರೀಕಾಕುಲಂ : ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿರುವ  ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದ ಬಳಿ ಬೆಳಿಗ್ಗೆ 11.30ರ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ.  ಘಟನೆಯಲ್ಲಿ 7ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಹಾಗೂ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀಕಾಕುಲಂ

ಇದನ್ನೂಓದಿ : ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಪುನಾರಾಯ್ಕೆ

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ‘ಶ್ರೀಕಾಕುಲಂ ಜಿಲ್ಲೆಯ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತವು ನನಗೆ ನೋವುಂಟು ಮಾಡಿದೆ. ಅಹಿತಕರ ಘಟನೆಯಲ್ಲಿ ಭಕ್ತಾಧಿಗಳು ಪ್ರಾಣ ಕಳೆದುಕೊಂಡಿರುವುದು ದುಃಖದ ಸಂಗತಿಯಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದಿದ್ದಾರೆ. ಶ್ರೀಕಾಕುಲಂ

ಎನ್‌. ಚಂದ್ರಬಾಬು ನಾಯ್ಡು ಅವರು ಕಾಲ್ತುಳಿತದಲ್ಲಿ ಗಾಯಗೊಂಡಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಭರವಸೆ ನೀಡಿದ್ದು, ಘಟನಾ ಸ್ಥಳದ ಮೇಲ್ವಿಚಾರಣೆಗೆ ಅಧಿಕಾರಿಗಳು ಹಾಗೂ ಸ್ದಳೀಯ ನಾಯಕರಿಗೆ ಸೂಚಿಸಿದ್ದಾರೆ.

ಇದನ್ನೂ ನೋಡಿ : ಧರ್ಮಸ್ಥಳ ಪ್ರಕರಣ | ಎಸ್ಐಟಿ ಪೊಲೀಸರು ದೌರ್ಜನ್ಯ ಮಾಡುವಂತಿಲ್ಲ- ಹೈಕೋರ್ಟ್ ಆದೇಶ Janashakthi Media

Donate Janashakthi Media

Leave a Reply

Your email address will not be published. Required fields are marked *