ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಎಂಇಎಸ್ ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಿನಲ್ಲಿ ಅನುಮತಿ ಪಡೆಯುತ್ತಿದ್ದಾರೆ. ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್ ನಿಷೇಧಿಸುವ ಬಗ್ಗೆ ಚಿಂತಿಸಲಾಗುವುದು. ಈ ಬಗ್ಗೆ ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಚೆನ್ನೈ | ಎಐಡಿಎಂಕೆ ಮತ್ತು ಬಿಜೆಪಿ ನಡುವಿನ ಭಿನ್ನಮತ ಸ್ಫೋಟ
ಇನ್ನು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾಡಳಿತದ ಅನುಮತಿ ಪಡೆದುಕೊಳ್ಳದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಅನುಮತಿ ನೀಡುವುದಿಲ್ಲವೆಂದು ಹೇಳಿದ್ದ ಜಿಲ್ಲಾಡಳಿತ ಕಾರ್ಯಕರ್ತರಿಗೆ ಪೊಲೀಸ್ ಭದ್ರತೆ ಒದಗಿಸಿತ್ತು.
ಇದನ್ನೂ ನೋಡಿ: ನಿರಂಜನ ಶತಮಾನ | ನಿರಂಜನ ಆಧುನಿಕ ಮನಸ್ಸಿನ ಪ್ರಯೋಗಶೀಲ ಸಾಹಿತಿ – ಪ್ರೊ. ರಾಜೇಂದ್ರ ಚೆನ್ನಿ Janashakthi Media
