ಬಿಸಿಎಮ್ ಇಲಾಖೆಯ 62 ನೂತನ ಹಾಸ್ಟೆಲ್ ಮಂಜೂರು: ಎಸ್ಎಫ್ಐ ಸಂಘಟನೆಯ ಹೋರಾಟಕ್ಕೆ ಸಂದ ಜಯ

ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ತಪ್ಪಿಸಲು ರಾಜ್ಯ ಸರ್ಕಾರ ನೂತನವಾಗಿ 62 ಹಾಸ್ಟೆಲ್ ಮಂಜೂರು ಮಾಡಿರವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿಯು ಸ್ವಾಗತಿಸುತ್ತದೆ ಇದು ನಮ್ಮ ಸಂಘಟನೆಯ ಹೋರಾಟಕ್ಕೆ ದೊರೆತ ಜಯ ಎಂದು ಎಸ್ಎಫ್ಐ ಹಾಸ್ಟೆಲ್ ಉಪಸಮಿತಿಯ ರಾಜ್ಯ ಸಂಚಾಲಕ ಅರುಣ್ ನಾಗವತ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ಸಮುದಾಯಕ್ಕೆ ಸೇರಿದ ಹತ್ತಾರು, ಸಾವಿರಾರು ವಿದ್ಯಾರ್ಥಿಗಳು ಪ್ರಮುಖವಾಗಿ ತಮ್ಮ ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿವಿಧ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಕ್ಕೆ ಶಿಕ್ಷಣ ಮುಂದುವರಿಸಲು ಬರವ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ಅರಿತುಕೊಂಡ ನಮ್ಮ ಸಂಘಟನೆಯು ನಿರಂತರವಾಗಿ ಹಾಸ್ಟೆಲ್ ಗಾಗಿ ಸಾವಿರಾರು ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲಾಗಳಲ್ಲಿ ಪ್ರತಿಭಟನೆ ನಡೆಸಿದೆ.

ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಎಚ್.ವೈ ಮೇಟಿ ನಿಧನ

ಜೊತೆಗೆ ಹಾಸ್ಟೆಲ್ ಬಲವರ್ಧನೆಗಾಗಿ ರಾಜ್ಯವ್ಯಾಪ್ತಿ ಶೈಕ್ಷಣಿಕ ಜಾಥಾ ಮಾಡಿ ಹಾವೇರಿಯಲ್ಲಿ ನಡೆದ ಎಸ್ಎಫ್ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಮಾವೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೂತನ ಹಾಸ್ಟೆಲ್ ಮಂಜೂರು ಮಾಡುಂತೆ ಆಗ್ರಹಿಸಿ ಹೋರಾಟದ ನಿರ್ಣಯ ತೆಗೆದುಕೊಳ್ಳಲಾಗಿದ ಹಿನ್ನೆಲೆಯಲ್ಲಿ ಬಿಸಿಎಮ್ ಇಲಾಖೆಯ 62 ನೂತನ ಹಾಸ್ಟೆಲ್ ಮಂಜೂರು ಮಾಡಿ ಆದೇಶ ಹೊರಡಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು.

ನಮ್ಮ ಸಂಘಟನೆಯ ಹೋರಾಟದ ಪರಿಣಾಮವಾಗಿ ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ 100 ಸಂಖ್ಯೆ ಬಲವುಳ್ಳ 62 ಹಾಸ್ಟೆಲ್ ಮಂಜೂರು ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ಸ್ವಾಗತ ಮಾಡುತ್ತದೆ. ಅದೇ ರೀತಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ  ಹಾಸ್ಟೆಲ್ ಗಳು ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು.

ಹಾಸ್ಟೆಲ್ ಮಂಜೂರು ಮಾಡಲು ಕಾರಣರಾದ ರಾಜ್ಯದ ಮುಖ್ಯಮಂತ್ರಿಗಳಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಿಗೆ, ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಸಹ ಸಂಚಾಲಕರಾದ ವಿನಾಯಕ ಎಸ್ ಐ, ಶರೀಫ್ ಎಮ್ ಪಿ, ಶರಣು ಎಂ ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ನೋಡಿ: ಧರ್ಮಸ್ಥಳ | ಕೊಂದವರು ಯಾರು? ನ್ಯಾಯಕ್ಕಾಗಿ ಮಹಿಳೆಯರ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *