ನಗರಸಭೆ, ಪುರಸಭೆಗಳಿಗೆ ಆಡಳಿತಾಧಿಕಾರಿಗಳ ನೇಮಕ

Please follow and like us:
ಬೆಂಗಳೂರು: ರಾಜ್ಯ ಸರ್ಕಾರವು, ಚುನಾಯಿತ ಕೌನ್ಸಿಲ್ ಅವಧಿ ಮುಗಿದ ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಆದೇಶಿಸಿದೆ.

ನ್ಯಾಯಾಲಯದಲ್ಲಿನ ಪ್ರಕರಣ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಚುನಾವಣೆಯ ಮೂಲಕ ಚುನಾಯಿತ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗದ 42 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯಿತಿ ಸೇರಿದಂತೆ ಒಟ್ಟು 128 ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ| ಮಹಿಳೆಯ ಮನೆ ಮುಟ್ಟುಗೋಲು ಕ್ರಮ ವಾಪಸ್‌ ಪಡೆಯಲು ಮನವಿ

ನಗರ ಸಭೆಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪುರಸಭೆಗಳಿಗೆ ಉಪ ವಿಭಾಗಾಧಿಕಾರಿಗಳು, ಪಟ್ಟಣ ಪಂಚಾಯ್ತಿಗಳಿಗೆ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಗಳಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಇದನ್ನೂ ನೋಡಿ: ಬಿಹಾರ ಚುನಾವಣೆ | ಭರಪೂರ ಭರವಸೆ -ಬದಲಾವಣೆಯತ್ತ ಮತದಾರರ ಒಲವು Janashakthi Media | Bihar Election 2025

Please follow and like us:
Donate Janashakthi Media

Leave a Reply

Your email address will not be published. Required fields are marked *