ಕೆಂಪು ಕೋಟೆ ಬಳಿ ಕಾರು ಸ್ಫೋಟ: ಬೆಂಗಳೂರು ಹೈ ಅಲರ್ಟ್!

ಬೆಂಗಳೂರು: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಕಾರು ಸ್ಫೋಟಗೊಂಡಿರುವ ಘಟನೆ ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ನಗರ ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕರು ಡಾ. ಎಂ ಎ ಸಲೀಂ ಸೂಚನೆ ನೀಡಿದ್ದಾರೆ. ಕೆಂಪು

ಜಮ್ಮು ಮತ್ತು ಕಾಶ್ಮೀರ ಪೊಲೀಸರು ನವೆಂಬರ್‌ 10ರಂದು ದೆಹಲಿ ಸಮೀಪ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ಸಂಭವಿಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರಗಳು, ಮಾಲ್ ಗಳು, ದೇವಾಲಯಗಳು ಸೇರಿದಂತೆ ಎಲ್ಲಾ ಜನನಿಬಿಡ ಜಾಗಗಳಲ್ಲಿ ತೀವ್ರ ತಪಾಸಣೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಲಿಂಗತ್ವ ಅಲ್ಪಸಂಖ್ಯಾತ ಮಹಿಳೆ ಮೇಲೆ ಹಲ್ಲೆ, ಅಪಹರಣ: MGSP ಖಂಡನೆ

ನವೆಂಬರ್‌ 10ರ ರಾತ್ರಿ ಗಸ್ತುಗಳನ್ನು ಮತ್ತು ತಪಾಸಣೆ ಹೆಚ್ಚು ಮಾಡುವಂತೆ ಸೂಚಿಸಿದ್ದೂ, ಇದರ ಜೊತೆಗೆ ನಗರದ ಎಲ್ಲಾ ಲಾಡ್ಜ್ ಗಳಿಗೆ ಭೇಟಿ ನೀಡಿ, ಅಲ್ಲಿ ಉಳಿದುಕೊಂಡಿರುವ ಹೊರ ರಾಜ್ಯದವರ ಬಗ್ಗೆ ಮಾಹಿತಿ ಪಡೆಯುವಂತೆ ಸೂಚಿಸಿದ್ದಾರೆ. ಏನಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡಬಂದರೆ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಎಂಎ ಸಲೀಂ ಅವರು ಸೂಚಿಸಿದ್ದಾರೆ.

ಅಲ್ಲದೆ, ವಿಶೇಷವಾಗಿ, ಮಲ್ಲೇಶ್ವರಂನಲ್ಲಿ ನಡೆಯುತ್ತಿರುವ ಕಡಲೇಕಾಯಿ ಪರಿಷೆ ಹಾಗೂ ಬಸವನಗುಡಿಯಲ್ಲಿ ನ. 17ರಿಂದ ಆರಂಭವಾಗುವ ಬಸವನಗುಡಿ ಕಡಲೆಕಾಯಿ ಪರಿಷೆಗೂ ಹೆಚ್ಚಿನ ಭದ್ರತೆಯನ್ನು ಒದಗಿಸಲು ಸೂಚಿಸಲಾಗಿದೆ.

ಜಿಲ್ಲೆಗಳಲ್ಲೂ ಕಟ್ಟೆಚ್ಚರಕ್ಕೆ ಸೂಚನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕರು ಸೂಚಿಸಲಾಗಿದೆ. ಅದರಂತೆ, ಎಲ್ಲಾ ಜಿಲ್ಲೆಗಳಲ್ಲಿನ ಮಾರುಕಟ್ಟೆಗಳು, ಸಿನಿಮಾ ಥಿಯೇಟರ್, ಜಾತ್ರೆ, ಸ್ಥಳೀಯ ಹಬ್ಬಗಳು – ಮೆರವಣಿಗೆಗಳಿಗೆ ವಿಶೇಷ ಭದ್ರತೆ ಕೊಡುವಂತೆ ಆದೇಶಿಸಿದ್ದಾರೆ.

ಇದನ್ನೂ ನೋಡಿ: ಕಡಲೆಕಾಯಿ ಪರಿಷೆಗೆ ಶೃಂಗಾರಗೊಳ್ಳುತ್ತಿದೆ ಬಸವನಗುಡಿ |17 ರಿಂದ 21 | Janashakthi Media| #kadalekaiparishe

Donate Janashakthi Media

Leave a Reply

Your email address will not be published. Required fields are marked *