ಶ್ರೀರಂಗಪಟ್ಟಣ: ನವೆಂಬರ್ 10ರ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಯ ಆಸುಪಾಸಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಬಾಂಬ್ ಸ್ಫೋಟ-ಸಿಪಿಐ(ಎಂ) ಖಂಡನೆ
‘ಅಣೆಕಟ್ಟೆ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಮೇಲಧಿಕಾರಿಗಳಿಂದ ಆದೇಶ ಬಂದಿದೆ. ಹಾಗಾಗಿ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಚಲನ ವಲನಗಳ ಬಗ್ಗೆ ನಿಗಾ ಇಡಲಾಗಿದೆ’ ಎಂದು ಕೆಎಸ್ಐಎಸ್ಎಫ್ ಕಮಾಂಡೆಂಟ್ ಪ್ರಮೋದ್ ತಿಳಿಸಿದ್ದಾರೆ.
‘ಕೆಆರ್ಎಸ್ ಅಣೆಕಟ್ಟೆ ಭದ್ರತೆಗೆ ಪ್ರತ್ಯೇಕವಾಗಿ ಕೈಗಾರಿಕಾ ಭದ್ರತಾ ಪಡೆಯೇ ಇದೆ. ಹಾಗಾಗಿ ಸಿವಿಲ್ ಪೊಲೀಸರನ್ನು ನಿಯೋಜನೆ ಮಾಡಿಲ್ಲ. ದೆಹಲಿ ಸ್ಫೋಟ ಘಟನೆಯ ನಂತರ ಕೆಆರ್ಎಸ್ಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿಲ್ಲ’ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ನೋಡಿ: News about Death of Theater have been greatly exaggerated”: Sudhanva Deshpande of Janam
