ಕನ್ನಡದ ʻತಿಥಿʼ ಸಿನಿಮಾದ ಹಿರಯ ನಟ ಗಡ್ಡಪ್ಪ ನಿಧನ

ಮಂಡ್ಯ: ಕನ್ನಡದ ತಿಥಿ ಸಿನಿಮಾ ಮೂಲಕ ಖ್ಯಾತಿಯಾಗಿದ್ದ ಗಡ್ಡಪ್ಪ ನವೆಂಬರ್ 12ರಂದು ನಿಧನರಾಗಿದ್ದಾರೆ. ತಿಥಿ ಸಿನಿಮಾ ಮೂಲಕ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದ ಗ್ರಾಮೀಣ ಪ್ರತಿಭೆ ಗಡ್ಡಪ್ಪ ಅವರು ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದೂ, ಇದೀಗ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ವಿಧಿವಶರಾಗಿದ್ದಾರೆ.

ಗಡ್ಡಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಕೆಲ ದಿನಗಳಿಂದ ಚನ್ನೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚನ್ನೇಗೌಡ ನಿಧನರಾದ್ದಾರೆ. ಕನ್ನಡ

ಇದನ್ನೂ ಓದಿ: ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿ

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು. ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ.

ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು.

ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು. ಗಡ್ಡಪ್ಪ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಕವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ. ಇದೀಗ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಇದನ್ನೂ ನೋಡಿ: ಸಕ್ಕರೆ ಇಳುವರಿ ಆಧಾರದ ಮೇಲೆ ಪ್ರತಿ ಟನ್‌ಗೆ 5500ನೀಡಬೇಕು – ಎನ್‌ ಎಲ್‌. ಭರತ್‌ರಾಜ್‌ Janashakthi Media

Donate Janashakthi Media

Leave a Reply

Your email address will not be published. Required fields are marked *