ತುಮಕೂರು: ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಸಿಕೊಂಡು ಕೂಲಿ ಕೊಡದೆ ಪರಾರಿಯಾದ ಗಾರ್ಮೆಂಟ್ಸ್ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗಾರ್ಮೆಂಟ್ವಕಾರ್ಮಿಕರು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನವೆಂಬರ್ 11ರಂದು ಪ್ರತಿಭಟನೆ ನಡೆಸಿದರು.
‘ಕ್ಯಾತ್ಸಂದ್ರದ ಆರ್.ವಿ.ಲೈಫ್ ಸ್ಟೈಲ್ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ 3-4 ತಿಂಗಳಿನಿಂದ ಕೂಲಿ ನೀಡಿಲ್ಲ. ಅವರು ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಈಗ ಮಾಲೀಕರು ಕಾರ್ಖಾನೆ ಮುಚ್ಚಿಕೊಂಡು ಪರಾರಿಯಾಗಿದ್ದಾರೆ. 25–30 ಮಹಿಳಾ ಕಾರ್ಮಿಕರಿಗೆ ವೇತನ ಕೊಟ್ಟಿಲ್ಲ’ ಎಂದು ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಟಿ.ಆರ್.ಕಲ್ಪನಾ ಹೇಳಿದರು.
ಇದನ್ನೂ ಓದಿ: ಕೆಂಪು ಕೋಟೆ ಬಳಿ ಕಾರು ಸ್ಫೋಟ: ಕೆಆರ್ಎಸ್ ಅಣೆಕಟ್ಟೆಯ ಆಸುಪಾಸಿನಲ್ಲಿ ಕಟ್ಟೆಚ್ಚರ
ಸುಮಾರು 9 ತಿಂಗಳು ಕಾಲ ಕ್ಯಾತ್ಸಂದ್ರ, ಬಡ್ಡಿಹಳ್ಳಿ ಭಾಗದಲ್ಲಿ ಉತ್ಪಾದನಾ ಚಟುವಟಿಕೆ ನಡೆಸಿದ್ದರು. ಭಾನುವಾರ ಸಹ ರಜೆ ನೀಡದೆ ಕೆಲಸ ಮಾಡಿಸಿಕೊಂಡಿದ್ದರು. ಇದಕ್ಕೆ ನೀಡಬೇಕಾದ ವೇತನ ಸಹ ನೀಡಿಲ್ಲ ಎಂದರು.
ಕಾರ್ಮಿಕರಿಗೆ ಬರಬೇಕಾದ ಕೂಲಿ ಕೊಡಿಸಿ, ಅವರ ಬದುಕಿಗೆ ನೆರವಾಗಬೇಕು ಎಂದು ಒತ್ತಾಯಿಸಿ ಕಾರ್ಮಿಕ ಅಧಿಕಾರಿ, ಡಿವೈಎಸ್ಪಿ, ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಿಐಟಿಯು ಜಿಲ್ಲಾ ಕಾರ್ಯಕಾರಿ ಮಂಡಳಿಯ ಸದಸ್ಯ ಸುಜಿತ್ ನಾಯಕ ಇತರರು ಪಾಲ್ಗೊಂಡಿದ್ದರು.
ಇದನ್ನೂ ನೋಡಿ: JNU ವಿದ್ಯಾರ್ಥಿ ಸಂಘದ ಚುನಾವಣೆ | ಎಡ ವಿದ್ಯಾರ್ಥಿ ಒಕ್ಕೂಟ ಕ್ಲೀನ್ ಸ್ವೀಪ್ Janashakthi | #JNUSU |#LeftUnity
