ಕೆ-ಸೆಟ್ ತಾತ್ಕಾಲಿಕ ಫಲಿತಾಂಶ ಪ್ರಕಟಣೆ: ನವೆಂಬರ್ 17ರೊಳಗೆ ಪೂರಕ ದಾಖಲೆ ಸಲ್ಲಿಸಿ

Please follow and like us:
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ವು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ನವೆಂಬರ್‌ 15ರಂದು ಪ್ರಕಟಿಸಿದೆ. ತಾತ್ಕಾಲಿಕ

ಪರೀಕ್ಷೆ ನಡೆದು 13 ದಿನಗಳಲ್ಲೇ ಫಲಿತಾಂಶ ಪ್ರಕಟಿಸಲಾಗಿದೆ. ಫಲಿತಾಂಶ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 17ರಂದು ಮಧ್ಯಾಹ್ನ‌ 12 ಗಂಟೆ ಒಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ವೈದ್ಯ ನೇಮಿಸಿಕೊಳ್ಳುವ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ರಾಜ್ಯ ಸರ್ಕಾರ

ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್‌) ನ.2ರಂದು 11 ಜಿಲ್ಲೆಗಳಲ್ಲಿ ನಡೆಸಲಾಗಿತ್ತು. 33 ವಿಷಯಗಳಿಗೆ ನಡೆದ ಕೆ-ಸೆಟ್‌ ಪರೀಕ್ಷೆಗೆ 1.36 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಗಳಿಗೆ ನೆಗೆಟಿವ್‌ ಮೌಲ್ಯಮಾಪನ ಇರಲಿಲ್ಲ.

ಇದನ್ನೂ ನೋಡಿ: CITU ರಾಜ್ಯ ಸಮ್ಮೇಳನ | ಬಹಿರಂಗ ಸಭೆ | ಹಾಸನ

Please follow and like us:
Donate Janashakthi Media

Leave a Reply

Your email address will not be published. Required fields are marked *