ಪಟ್ನಾ | ನಿತೀಶ್‌ ಕುಮಾರ್‌ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

Please follow and like us:
ಪಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ  ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು 10ನೇ ಬಾರಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ರಾಜ್ಯಪಾಲ ಮೊಹಮ್ಮದ್‌ ಅರಿಫ್ ಖಾನ್‌ ಅವರು ನಿತೀಶ್‌ ಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.

ಇದನ್ನೂ ಓದಿ : ವಿಜಯಪುರ | ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಒನ್ ಟೈಮ್ ಸೆಟಲ್ಮೆಂಟ್ ಜಾರಿಗಾಗಿ ಬೆಂಗಳೂರು ಚಲೋ

ಪ್ರಮಾಣ ವಚನ ಸಾಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಸಚಿವರು ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವರು ನಾಯಕರು ಭಾಗವಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಸಚಿವರು ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವರು ನಾಯಕರು ಸಾಮಾರಂಭದಲ್ಲಿ ಭಾಗವಹಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಸದಸ್ಯ ಪಕ್ಷಗಳ ಜಂಟಿ ಸಭೆಯಲ್ಲಿ ನಿತೀಶ್‌ ಕುಮಾರ್‌ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ (ಎನ್‌ಡಿಎಎಲ್‌ಪಿ) ನಾಯಕನನ್ನಾಗಿ ಬುಧವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಅವರು, ರಾಜ್ಯಪಾಲ ಮೊಹಮ್ಮದ್‌ ಖಾನ್‌ ಅವರನ್ನು ಸಂಜೆ ಭೇಟಿಯಾಗಿ ನಿರ್ಗಮಿತ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ನಿತೀಶ್‌ ಅವರನ್ನು ಜೆಡಿಯು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.

ಮತ್ತೊಂದೆಡೆ, ಬಿಜೆಪಿ ನಾಯಕರ ಸಭೆಯಲ್ಲಿ ಸಾಮ್ರಾಟ್‌ ಚೌಧರಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನನ್ನಾಗಿ, ವಿಜಯ್‌ ಸಿನ್ಹಾ ಅವರನ್ನು ಉಪನಾಯಕನನ್ನಾಗಿ ಆರಿಸಲಾಗಿತ್ತು. ಈ ಇಬ್ಬರೂ ನಾಯಕರು ನಿರ್ಗಮಿತ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದರು.

ನವೆಂಬರ್ 6 ಮತ್ತು 11ರಂದು ನಡೆದ ಎರಡು ಹಂತಗಳ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ–ನಿತೀಶ್‌ ಕುಮಾರ್ ಜೋಡಿಯ ಪ್ರಭಾವಳಿಯ ನೆರವಿನಿಂದ ಎನ್‌ಡಿಎ ಮೈತ್ರಿಕೂಟವು 243 ಕ್ಷೇತ್ರಗಳ ಪೈಕಿ 203 ಸ್ಥಾನಗಳನ್ನು ಗೆದ್ದಿತ್ತು. ಇತ್ತ ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್‌’ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಷ್ಟೇ ಶಕ್ತವಾತ್ತು.

ಇದನ್ನೂ ನೋಡಿ : 

Please follow and like us:
Donate Janashakthi Media

Leave a Reply

Your email address will not be published. Required fields are marked *