ಮೈಸೂರು : ಮೈಸೂರು ವಿಶ್ವವಿದ್ಯಾಲಯ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯ ಇಲ್ಲಿಗೆ ವಿದ್ಯಾಭ್ಯಾಸ ಮಾಡಲು ಹೊರ ಜಿಲ್ಲೆಯ/ ರಾಜ್ಯ / ವಿದೇಶದಿಂದ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆ ವಿದ್ಯಾರ್ಥಿಗಳೆಲ್ಲ ವಿಶ್ವ ವಿದ್ಯಾಲಯದ ವಸತಿನಿಲಯಗಳನ್ನೇ ಅವಲಂಬಿಸಿದ್ದಾರೆ. ಆದರೆ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳು ಸರಿಯಿಲ್ಲ ಎಂದು ವಿಧ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಹಾಸ್ಟೆಲ್ ಮುಂದೆ ಬಸ್ ನಿಲ್ಲಿಸದ ಸಾರಿಗೆ ಸಿಬ್ಬಂದಿಗಳ ಮೇಲೆ ಕ್ರಮಜರುಗಿಸಿ: ವಿದ್ಯಾರ್ಥಿನಿಯರ ಆಗ್ರಹ
ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಅಭಿ ಮೈಸೂರು, ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಾ, ವಿಶ್ವ ವಿದ್ಯಾಲಯದ ವಿದ್ಯಾರ್ಥಿ ನಿಲಯಗಳಲ್ಲಿ ಸರಿಯಾದ ಸ್ವಚ್ಛತೆ ಇಲ್ಲ ಸರಿಯಾದ ಸಮಯಕ್ಕೆ ಸ್ವಚ್ಛತೆ ಮಾಡದ ಕಾರಣ ಹಲವು ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಹಾಗೂ ವಿದ್ಯಾರ್ಥಿಗಳು ಹೊರಗಡೆಯಿಂದ ನೀರನ್ನು ಕುಡಿಯುವ ಪರಿಸ್ಥಿತಿ ಉಂಟಾಗಿದೆ. ಶೌಚಾಲಯಗಳಂತು ಸ್ವಚ್ಛತೆ ಇಲ್ಲ, ಸ್ವಚ್ಛತೆಯನ್ನು ಸರಿಯಾದ ಸಮಯಕ್ಕೆ ಮಾಡುತ್ತಿಲ್ಲ ಇದರಿಂದ ಶೌಚಾಲಯಗಳು ಉಪಯೋಗಿಸಲು ಆಗುತ್ತಿಲ್ಲ. ಹಾಗೂ ವಿವಿಧ ಸಮಸ್ಯೆಗಳು ವಿರ್ಧಾರ್ಥಿಗಳು ಎದುರಿಸುತ್ತಿದ್ದಾರೆ ಈ ಕೂಡಲೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ವಿ ವಿ ಆಡಳಿತ ಮಂಡಳಿಗೆ ಒತ್ತಾಯಿಸಿದರು.

ವಿದ್ಯಾರ್ಥಿನಿಲಯಗಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರ ಕಳಪೆ ಮಟ್ಟದ ಆಹಾರವನ್ನು ನೀಡಲಾಗುತ್ತಿದ್ದೆ. ವಿದ್ಯಾರ್ಥಿಗಳಿಗೆ ಬೇಕಾಗಿರುವ ಪೌಷ್ಟಿಕ ಆಹಾರ ನೀಡಬೇಕು ಆದರೆ ವಿದ್ಯಾರ್ಥಿನಿಲಯಗಳಲ್ಲಿ ತರಕಾರಿಗಳೆ ಇರುವುದಿಲ್ಲ, ಕಾಳು ಧಾನ್ಯಗಳು ಇರುವುದಿಲ್ಲ. ಹೀಗೆ ಮೈಸೂರು ವಿ ವಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹಲವು ತೊಂದರೆಗಳು ಉಂಟಾಗುತ್ತಿದ್ದು ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸದ ಮೇಲೆ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬಿರುತ್ತಿದೆ. ಗೀಜರ್ ವ್ಯವಸ್ಥೆ ಮಾಡಬೇಕು ಗೀಜರ್ ಗಳಲ್ಲಿ ಕರೆಂಟ್ ಶಾಕ್ ಹೊಡೆಯುತ್ತಿದೆ ಗೀಜರ್ ಗಳನ್ನೂ ಹಾಕಿ ಕೊಡಬೇಕು ಮೈಸೂರು ವಿಶ್ವ ವಿದ್ಯಾಲಯದ ಹಾಸ್ಟೆಲ್ ಗಳಿಗೆ ಕುಡಿಯುವ ನೀರು, ಶೌಚಾಲಯ ಸ್ವಚ್ಛತೆ, ಪೌಷ್ಟಿಕ ಆಹಾರ ನೀಡಬೇಕು ಹಾಗೂ ಹಾಸ್ಟೆಲ್ ಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷ ಪ್ರಜ್ವಲ್ ಟಿ ಎಸ್ , ಭರತ್ , ವನೀತ್ ಕುಮಾರ್. ಜಿ.ಸಿ, ರಾಜೇಶ.ಕೆ.ಆರ್ ಭರತ್.ಎನ್ ಹಾಜಾರಿದ್ದರು
ಇದನ್ನೂ ನೋಡಿ : ಕ್ಯಾರಿ ಓವರ್ ನಿಯಮ ಸಡಿಲಿಕೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ Janashakthi Media
