ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಒಟ್ಟು 11 ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಒಂದೇ ಸಮಯದಲ್ಲಿ ದಾಳಿ ನಡೆಸಲಾಗಿದೆ. ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ. ಸುಭಾಷ್ ಚಂದ್ರ ನಾಟೀಕರ್ ಸೇರಿದಂತೆ ಹಲವು ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಪರಿಶೀಲನೆ ನಡೆಸಲಾಗುತ್ತಿದೆ.
ಈ ದಾಳಿ ಅಕ್ರಮ ಆಸ್ತಿ ಗಳಿಕೆ ಮತ್ತು ಅಧಿಕಾರ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ನಡೆದಿದೆ.
ಬೀದರ್: ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರೇಮ್‌ಸಿಂಗ್ ರಾಥೋಡ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದಲ್ಲಿ ಶೋಧ ನಡೆಸಲಾಗುತ್ತಿದೆ.
ಇದನ್ನೂ ಓದಿ : ನ್ಯಾಯಾಂಗವು ಪ್ರಜಾಪ್ರಭುತ್ವದ ರಕ್ಷಣೆಯ ಕವಚವಾಗಿ ಕೆಲಸ ಮಾಡಬೇಕು – ಶ್ರೀ P V ಸುರೇಂದ್ರನಾಥನ್
ಯಾದಗಿರಿ: ಭೀಮರಾಯನಗುಡಿ ಪ್ರದೇಶದಲ್ಲಿರುವ ಅಧಿಕಾರಿ ಮನೆ-ಕಚೇರಿಗಳ ಪರಿಶೀಲನೆ ಮುಂದುವರಿಯುತ್ತಿದೆ.
ಶಿವಮೊಗ್ಗ: ಮೆಡಿಕಲ್ ಕಾಲೇಜಿನ ಡೀನ್ ಸ್ಟೇನೋಗ್ರಾಫರ್ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.
ಕೊಡಗು ಮತ್ತು ಮಡಿಕೇರಿ: PWD ಇಂಜಿನಿಯರ್ ಗಿರೀಶ್ ಅವರ ಮನೆ-ಕಚೇರಿಗಳೊಂದಿಗೆ, ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ಶೋಧ.
ಮಂಡ್ಯ: ಒಂದೇ ಸಮಯದಲ್ಲಿ 5 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, CAO ಪುಟ್ಟಸ್ವಾಮಿ ಮನೆ-ಕಚೇರಿ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಾವಣಗೆರೆ: APMC ಸಹಾಯಕ ನಿರ್ದೇಶಕ ಪ್ರಭು ಅವರ ನಿವಾಸ, ಕಚೇರಿ ಮತ್ತು ಸಂಬಂಧಿಕರ ಮನೆಗಳಲ್ಲೂ ಪರಿಶೀಲನೆ ನಡೆದಿದೆ.
ಹಾವೇರಿ: ನಗರಾಭಿವೃದ್ಧಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಶೇಖಪ್ಪ ಮತ್ತಿಕಟ್ಟಿ ಮನೆ ಮೇಲೆ ದಾಳಿ.
ಧಾರವಾಡ: ಪ್ರೊಫೆಸರ್ ಸುಭಾಷ್ ಚಂದ್ರ ಅವರ ನಿವಾಸದಲ್ಲಿ ಶೋಧ ಕಾರ್ಯ.
ಮೈಸೂರು: Revenue Inspector ರಾಮಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ.
ಇದನ್ನೂ ನೋಡಿ : ಧರ್ಮಸ್ಥಳ ನಿಗೂಢ : ಹೊಸ ಅಪ್ಡೇಟ್ ಏನು? Janashakthi Media
