ಬೆಂಗಳೂರು : ಕರ್ನಾಟಕದ ನಂದಿನಿ ತುಪ್ಪ ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .
ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .
ಇದನ್ನೂ ಓದಿ : ರೈತರಿಗೆ ಪ್ರದೇಶ-ನಿರ್ದಿಷ್ಟ ಸಲಹೆ, ಮಾಹಿತಿಗಳನ್ನು ಒದಗಿಸಲು ಎಐ ವೇದಿಕೆ: ಕೃಷಿ ಇಲಾಖೆ
ಇಂದು ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.
ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ದಕ್ಕಿಲ್ಲ ಎಂದೂ ಕೂಡ ಅವರು ತಿಳಿಸಿದರು.
ಇದನ್ನೂ ನೋಡಿ : ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರಕಾರ | ತಳ ಸಮುದಾಯಕ್ಕೆ ಎಸಗುತ್ತಿರುವ ದ್ರೋಹ Janashakthi Media
