ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಶೀಘ್ರದಲ್ಲೇ ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಸೇರಿ ಒಟ್ಟು 18 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 12 ಸಾವಿರ, ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಮೂಲಕ ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದ ಹಾಗೆ ಆಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಳ್ಳಾರಿ |ಪಿ ಜಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಹಾಗೂ ಸರ್ಟಿಫಿಕೇಟ್‌ ನೀಡಿಲ್ಲ ಎಂದು ಎಸ್‌ ಎಫ್‌ ಐ ಆರೋಪ

ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರ ನೇಮಕಾತಿ ಆದಷ್ಟು ಬೇಗನೆ ಮುಗಿಯಲಿದೆ, ಈಗಿನಿಂದಲೇ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾಗಿ ತಯಾರಿ ಮಾಡಲಾಗುತ್ತಿದೆ ಎಂದರು.

ಇದನ್ನೂ ನೋಡಿ: SIR – ಸಾಧಕ – ಬಾಧಕಗಳು ವಿಚಾರ ಮಂಡನೆ – ಸಂವಾದ

Donate Janashakthi Media

Leave a Reply

Your email address will not be published. Required fields are marked *