ಬೆಂಗಳೂರು | ಹಾಸ್ಯ ನಟ ಉಮೇಶ್ ನಿಧನ : ಅಂತಿಮ ದರ್ಶನಕ್ಕೆ | ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ

ಬೆಂಗಳೂರು: ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಾಸ್ಯ ನಟ ಉಮೇಶ್ ತೀವ್ರ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಮೇಶ್ ಅವರ ಪಾರ್ಥಿವಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಕಿದ್ವಾಯಿ ಆಸ್ಪತ್ರೆಯಿಂದ ಜೆ.ಪಿನಗರದಲ್ಲಿರುವ ಅವರ ನಿವಾಸಕ್ಕೆ ತರಲಾಗಿದೆ. ನಟನ ಅಗಲಿಕೆಗೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ.

ಇದನ್ನೂ ಓದಿ : ಸೌಜನ್ಯಾ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಎಲ್‌ಪಿ ಸಲ್ಲಿಕೆ

ಬೆಳಿಗ್ಗೆ 11 ಗಂಟೆ ಬಳಿಕ ಪಾರ್ಥಿವ ಶರೀರವನ್ನು ರವೀಂದ್ರ ಕಲಾ ಕ್ಷೇತ್ರದಲ್ಲಿ ಇಡಲಾಗುತ್ತಿದ್ದು, ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಉಮೇಶ್ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ್ದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.

ಉಮೇಶ್ ಅವರು ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯತೆ ಪಡೆದಿದ್ದರು. ಇದೀಗ ಅವರ ನಿಧನದಿಂದ ಚಿತ್ರರಂಗದ ಕಲಾವಿದರು ಸೇರಿ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇದನ್ನೂ ನೋಡಿ : ದಿನಪೂರ್ತಿ ಕೆಲಸ ಕಮ್ಮಿ ವೇತನ : ಅಂಗನವಾಡಿ, ಬಿಸಿಯೂಟದವರ ಬದುಕಿನ ಕಥೆ Janashakthi Media

Donate Janashakthi Media

Leave a Reply

Your email address will not be published. Required fields are marked *