ಬೆಂಗಳೂರು: ನಗರದ ಪರಪ್ಪನ ಅಗ್ರಹಾರದಲ್ಲಿ ಸ್ಟ್ರಿಕ್ಟ್ ರೂಲ್ಸ್ ಜಾರಿಯಲ್ಲಿದ್ದು, ಇದೀಗ ಅಕ್ರಮಗಳ ತಡೆಗೆ ಕಾರಾಗೃಹ ಇಲಾಖೆ ಮುಖ್ಯಸ್ಥ ಬಿ. ದಯಾನಂದ್ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿ-ಸಿಬ್ಬಂದಿ ಪ್ರಮುಖವಾಗಿ ಭದ್ರತಾ ಸಿಬ್ಬಂದಿ, ಬ್ಯಾರಕ್ಗಳ ತಪಾಸಣೆ ಸಿಬ್ಬಂದಿ ಕಡ್ಡಾಯವಾಗಿ ಬಾಡಿವೋರ್ನ್ ಕ್ಯಾಮೆರಾ ಬಳಸಬೇಕು ಎಂದು ಆದೇಶಿಸಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಹಗರಣ: ಸಿಬಿಐ ತನಿಖೆ ಪ್ರಶ್ನಿಸಿದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ದರ್ಶನ್ ಬ್ಯಾರಕ್ನಲ್ಲಿ ಸಿಸಿ ಕ್ಯಾಮೆರಾ ಹಾಗೂ ಅಲ್ಲಿನ ಭದ್ರತಾ ಸಿಬ್ಬಂದಿ ಬಾಡಿವೋರ್ನ್ ಕ್ಯಾಮೆರಾ ಬಳಸುವಂತೆ ಸೂಚಿಸಲಾಗಿತ್ತು.
ಇದೀಗ ಅದೇ ಮಾದರಿಯಲ್ಲಿ ಎಲ್ಲಾ ಬ್ಯಾರಕ್ಗಳಲ್ಲೂ ಕಟ್ಟೆಚ್ಚರ ವಹಿಸಲು ದಯಾನಂದ್ ಮುಂದಾಗಿದ್ದಾರೆ. ಅದರಂತೆ ಪ್ರತಿ ನಿತ್ಯ ಜೈಲಿನ ಎಲ್ಲಾ ಬ್ಯಾರಕ್ಗಳನ್ನು 3-4 ಬಾರಿ ತಪಾಸಣೆ ನಡೆಸಬೇಕು. ಈ ವೇಳೆ ಸಿಬ್ಬಂದಿ ಬಾಡಿವೋರ್ನ್ ಕ್ಯಾಮೆರಾ ಬಳಸಬೇಕು ಎಂದು ಕಠಿಣ ಆದೇಶ ನೀಡಿದ್ದಾರೆ.
ಇದನ್ನೂ ನೋಡಿ: ಕಾರ್ಖಾನೆ ಕಾರ್ಮಿಕರ ಸಂಕಟಗಳು |CITU | ಕಾರ್ಮಿಕರು Janashakthi Media
