ಬೆಂಗಳೂರು | ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸ ತಯಾರಿಸುವಂತೆ  ಅಧಿಕಾರಿಗಳಿಗೆ ಸೂಚಿನೆ – ಎಂ.ಬಿ. ಪಾಟೀಲ್

ಬೆಂಗಳೂರು: ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜೊತೆ  ಗುರುವಾರ ವಿಧಾನಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ತಂಡದೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾತುಕತೆ ನಡೆಸಿದರು.

ಇದನ್ನೂ ಓದಿ : ವಿಜಯಪುರ ರೈಲು ಸಂಚಾರಕ್ಕೆ ಬೈಪಾಸ್ ಮಾರ್ಗ ಸಿದ್ಧ: ಶೀಘ್ರವೇ ಹೊಸ ರೈಲು ಸೇವೆ

ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಹಾಗೂ ಹೂಡಿಕೆ ಸಾಧ್ಯವಾಗುವಂತೆ ವಿಷನ್ ಡಾಕ್ಯುಮೆಂಟ್ ತಯಾರಿಸುವಂತೆ  ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರ್ಕಾರವು ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯ ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದಿದ್ದಾರೆ.

ಇದನ್ನೂ ನೋಡಿ : ಕೇಂದ್ರ ಸರಕಾರದ ವಿರುದ್ಧ ಬೀದಿಗಿಳಿದ ಅಂಗನವಾಡಿ, ಆಶಾ, ಬಿಸಿಯೂಟ ನೌಕರರು Janashakthi Media

Donate Janashakthi Media

Leave a Reply

Your email address will not be published. Required fields are marked *