ʼಗುಮ್ಮಡಿ ನರಸಯ್ಯʼ ಸಿನಿಮಾ ಪೋಸ್ಟರ್ ಬಿಡುಗಡೆ; ಮಾಜಿ ಶಾಸಕರ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಭೇಟಿ

ಆಂಧ್ರ ಪ್ರದೇಶ: ರಾಜ್ಯದಲ್ಲಿ ಗುಮ್ಮಡಿ ನರಸಯ್ಯ 5 ಬಾರಿ ಶಾಸಕರಾಗಿದ್ದರೂ ತಮ್ಮ ಸರಳ ವ್ಯಕ್ತಿತ್ವ, ಜೀವನಶೈಲಿಯಿಂದ ಜನಪ್ರಿಯರಾಗಿ ಎಲ್ಲರಿಗೂ ಮಾದರಿಯಾಗಿ ಸಾಕಷ್ಟು ಖ್ಯಾತಿ ಹೊಂದಿದ್ದಾರೆ. ಡಿಸೆಂಬರ್‌ 6ರಂದು ಅವರ ಹೆಸರಿನಲ್ಲಿ ತೆಲುಗಿನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.  ಬಿಡುಗಡೆ

ಅದರಲ್ಲಿ ಹೀರೋ ಆಗಿ ನಟಿಸುತ್ತಿರುವವರು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ. ಡಿಸೆಂಬರ್‌ 6ರಂದು ಚಿತ್ರಕ್ಕೆ ಮುಹೂರ್ತ ನಡೆಯಲಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಲ್ಯಾಪ್‌ಟಾಪ್ ಪೂರೈಕೆಯಲ್ಲಿ ಅಕ್ರಮ: ಲೋಕಾಯುಕ್ತ ದಾಳಿ ವೇಳೆ ಬಯಲು

ಗುಮ್ಮಡಿ ನರಸಯ್ಯ ಚಿತ್ರದ ಪೋಸ್ಟರ್

‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್​ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವಣ್ಣ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ಭೇಟಿ ನೀಡಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಧಾರಿತ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರು ನಟಿಸಲಿದ್ದಾರೆ. ಗುಮ್ಮಡಿ ನರಸಯ್ಯ ಅವರ ಪಾತ್ರವನ್ನು ಶಿವಣ್ಣ ಮಾಡಲಿದ್ದಾರೆ. ಹಾಗಾಗಿ ಭೇಟಿ ಮಾಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.

ಇದನ್ನೂ ನೋಡಿ: ಅಂಗನವಾಡಿ, ಬಿಸಿಯೂಟ, ಆಶಾ ನೌಕರರ ಹೋರಾಟ | ಕೇಂದ್ರ ಸರಕಾರ ಕೊಟ್ಟ ಭರವಸೆ ಏನು? Janashakthi Media

Donate Janashakthi Media

Leave a Reply

Your email address will not be published. Required fields are marked *