ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆ ತುಂಬಲು ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷಾ ಶುಲ್ಕ ನೆರೆ ರಾಜ್ಯಗಳಿಗೆ ಹೋಲಿಸಿದರೆ ಬಹಳ ಕಡಿಮೆಯಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಬೆಳಗಾವಿ
ಬಡ ಹಾಗೂ ಗ್ರಾಮೀಣ ಪ್ರದೇಶದ ಆಭ್ಯರ್ಥಿಗಳಿಗೆ ಹೊರೆಯಾಗುತ್ತಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುತ್ತಿದ್ದ ಪರೀಕ್ಷೆಗಳ ಪರೀಕ್ಷಾ ಶುಲ್ಕ 300 ರೂಪಾಯಿಯಿದ್ದರೆ, ಕೆಇಎ ಪರೀಕ್ಷಾ 750 ರೂ. ಶುಲ್ಕವಿದೆ. ಹೀಗಾಗಿ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ನಿರಾಣಿ ಹನುಮಂತ್ ರುದ್ರಪ್ಪ ಅವರು ಪ್ರಶ್ನಿಸಿದರು. ಬೆಳಗಾವಿ
ಇನ್ನೂ ಓದಿ : ಬಡ ಜನರ ಬದುಕು ದುಸ್ತರ : ಬಂಡವಾಳ ಶಾಹಿ ಪಕ್ಷಗಳಿಂದ ಜನರಿಗೆ ಸ್ವಾತಂತ್ರ್ಯವೇ ಇಲ್ಲ – ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ
ಇದಕ್ಕೆ ಉತ್ತರಿಸಿದ ಅವರು ಕೆಇಎ ವಿವಿಧ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ರಾಜ್ಯದಲ್ಲಿ 600ರೂಪಾಯಿಯಿದೆ. ತಮಿಳುನಾಡು ಹಾಗೂ ಆಂಧ್ರದಲ್ಲಿ ಕ್ರಮವಾಗಿ ಪರೀಕ್ಷಾ ಶುಲ್ಕಗಳು 1,000 ರೂ. ಹಾಗೂ 1,500 ರೂಪಾಯಿಯಿದೆ. ಅಲ್ಲದೇ, ಕೆಇಎ ಪರೀಕ್ಷಾ ಶುಲ್ಕದಿಂದ ಸಂಗ್ರಹಿಸಲಾಗುವ ಶುಲ್ಕವು ಪರೀಕ್ಷಾ ಸುಧಾರಣೆಗಳಿಗೆ ಹಾಗೂ ಸಿಬ್ಬಂದಿಗೆ ವೇತನ ನೀಡಲಾಗುತ್ತಿದೆ ಎಂದರು. ಬೆಳಗಾವಿ
ಕೆಇಎ ಶುಲ್ಕ ಹೆಚ್ಚಳಕ್ಕೆ ಕಾರಣ: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ವೆಬ್ ಕಾಸ್ಟ್ ಮಾಡಲಾಗುತ್ತಿದೆ. ಪರೀಕ್ಷೆಯಾದ ಕೆಲವೇ ಗಂಟೆಗಳಲ್ಲಿ ಒಎಂಆರ್ ಉತ್ತರ ಪ್ರತಿಯನ್ನು ಸ್ಕ್ಯಾನ್ ಮಾಡಿ ಆನ್ಲೈನ್ ನಲ್ಲಿ ಆಪ್ ಲೋಡ್ ಮಾಡಲಾಗುತ್ತಿದೆ. ಕೆಪಿಎಸ್ಸಿ ನಡೆಸುವ ಪರೀಕ್ಷೆಗಳಿಗೆ ಸರ್ಕಾರ ಅನುದಾನ ನೀಡಲಿದೆ. ಆದರೆ ಕೆಇಎಗೆ ಯಾವುದೇ ಅನುದಾನವಿಲ್ಲ. ಇದರ ಜೊತೆಗೆ ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ. ಕೃತಕ ಬುದ್ಧಿಮತ್ತೆ (ಎಐ) ಮುಖ ಗುರುತಿಸುವಿಕೆ ಸಾಫ್ಟ್ ವೇರ್ಗಳನ್ನ ಅಳವಡಿಸಿಕೊಳ್ಳಲಾಗುತ್ತಿದೆ. ಪರೀಕ್ಷೆಯಾದ ಕೆಲವೇ ಗಂಟೆಗಳಲ್ಲಿ ಒಎಂಆರ್ ಉತ್ತರ ಪ್ರತಿಯನ್ನು ಸ್ಕ್ಯಾನ್ ಮಾಡಿ ಆನ್ಲೈನ್ ನಲ್ಲಿ ಆಪ್ ಲೋಡ್ ಮಾಡಲಾಗುತ್ತಿದೆ. ಇಂತಹ ಹಲವು ಸುಧಾರಣಾ ಕ್ರಮಗಳನ್ನು ಕೆಇಎ ಜಾರಿ ಮಾಡಿದೆ. ಪರೀಕ್ಷಾ ಖರ್ಚು ಹಾಗೂ ಸಿಬ್ಬಂದಿಗಳಿಗೆ ವೇತನ ನೀಡಬೇಕಾಗಿರುವುದರಿಂದ ಪರೀಕ್ಷಾ ಶುಲ್ಕವನ್ನು ಅಭ್ಯರ್ಥಿಗಳಿಂದ ಪಾವತಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಸಚಿವರು ಸಮರ್ಥಿಸಿಕೊಂಡರು.
ಪರೀಕ್ಷಾ ಪ್ರಾಧಿಕಾರವು 2022ರಿಂದ ನಿಗದಿತ ಪ್ರಮಾಣ ಶುಲ್ಕ ವಿಧಿಸುತ್ತಿದೆ. ಪರೀಕ್ಷೆ ನಡೆಸುವ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾದರೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಶುಲ್ಕ ಹೆಚ್ಚಿಸಿಲ್ಲ. ಆರ್ಥಿಕ ಹೊರೆ ತಪ್ಪಿಸಲು ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ ಮೊದಲ ಹುದ್ದೆಗೆ ಮಾತ್ರ ಅವರಿಗೆ ಅನ್ವಯಿಸುವ ಪೂರ್ಣ ಅರ್ಜಿ ಶುಲ್ಕ ಪಾವತಿಸಲು ಹಾಗೂ ಹೆಚ್ಚುವರಿ ಹುದ್ದೆಗೆ ಕೇವಲ ರೂ.100 ವಿಧಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
