ಡ್ರಗ್ಸ್ ಮಾರಾಟ ಉತ್ತೇಜಿಸಿದರೆ ಪೊಲೀಸ್ ಸಿಬ್ಬಂದಿಗಳು ಸೇವೆಯಿಂದ ವಜಾ: ಜಿ. ಪರಮೇಶ್ವರ್

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಕೋಟ್ಯಾಂತರ ರೂ. ಮೌಲ್ಯದ ಡ್ರಗ್ಸ್ ಸಿಜ್ ಮಾಡಿದ್ದು, ಜೊತೆಗೆ ಹಲವು ವಿದೇಶಿ ಡ್ರಗ್ಸ್ ಹೆಡ್ಲರ್ ಗಳು ಸೇರಿದಂತೆ ಹಲವರನ್ನು ಅರೆಸ್ಟ್ ಮಾಡಿದ್ದಾರೆ. ಮಾರಾಟ

ಇದೀಗ ಈ ವಿಚಾರವಾಗಿ ಪೊಲೀಸ್ ಇಲಾಖೆಯಲ್ಲಿದ್ದುಕೊಂಡು ಮಾದಕವಸ್ತು ಮಾರಾಟಕ್ಕೆ ಉತ್ತೇಜನ ನೀಡುವ ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಸೇವೆಯಿಂದಲೇ ವಜಾ ಮಾಡುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ | ಅಭಿಪ್ರಾಯ ಸಂಗ್ರಹಿಸಿ : ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆಗೆ ಕ್ರಮ – ಸಚಿವ ಕೃಷ್ಣ ಭೈರೇಗೌಡ

ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಪಣ ತೊಡಲಾಗಿದ್ದು, ಈಗಾಗಲೇ ಪಿಡುಗಿನ ವಿರುದ್ಧ ಸಮರ ಸಾರಲಾಗಿದೆ. ಹಿಂದೆಂದಿಗಿಂತಲೂ ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ ಸಾವಿರಾರು ಕೆ.ಜಿ. ತರಹೇವಾರಿ ಡ್ರಗ್ಸ್ ಜಪ್ತಿ ಮಾಡಿ, ನಾಶಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎಎನ್ ಟಿಎಫ್) ಪಡೆ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪಡೆಯು ಪರಿಣಾಮಕಾರಿ ಕೆಲಸ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ನೋಡಿ: ಧರ್ಮಸ್ಥಳ| ಕೊಂದವರು ಯಾರು?ಏಕವ್ಯಕ್ತಿ ಪ್ರದರ್ಶನ Janashakthi Media

Donate Janashakthi Media

Leave a Reply

Your email address will not be published. Required fields are marked *