ಗಜೇಂದ್ರಗಡ | ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ಗಜೇಂದ್ರಗಡ: ಡಿ.20 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಅನಿರ್ದಿಷ್ಟಾವಧಿ ಧರಣಿ ಕುರಿತು ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಶನಿವಾರ ಗಜೇಂದ್ರಗಡ ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರು ಪೂರ್ವಭಾವಿ ಸಭೆ ನಡೆಸಿದರು

ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಲಿಂಗಪ್ಪ ಮುತಾರಿ ಮಾತನಾಡಿ, ಕನಿಷ್ಟ ವೇತನ ₹36 ಸಾವಿರ ಜಾರಿಗೊಳಿಸಬೇಕೆಂದು ಹಲವು ದಿನಗಳ ಬೇಡಿಕೆಯಾಗಿದೆ.

ಇದನ್ನೂ ಓದಿ : ಸರ್ಕಾರಿ ಉದ್ಯೋಗಿಗಳು ರಾಜೀನಾಮೆ ನೀಡಿದರೆ ಪಿಂಚಣಿ ಸೌಲಭ್ಯವಿಲ್ಲ: ಸುಪ್ರೀಂ ಕೋರ್ಟ್

‘ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್‌, ಸ್ವಚ್ಛತಾಗಾರರು, ನೀರುಗಂಟಿಗಳು, ಸಿಪಾಯಿಗಳನ್ನು ಸರ್ಕಾರಿ ನೌಕರರೆಂದು ಘೋಷಿಸಿ, ಗ್ರಾಮ ಪಂಚಾಯಿತಿ ನೌಕರರಿಗೆ ನಿವೃತ್ತಿ ಉಪಧನದ ಜೊತೆಗೆ ಸರ್ಕಾರದಿಂದ ಕಂದಾಯ ಇಲಾಖೆಯ ನೌಕರರಿಗೆ ಘೋಷಣೆ ಮಾಡಿದ ₹10 ಲಕ್ಷ ಗ್ರಾಮ ಪಂಚಾಯಿತಿ ನಿವೃತ್ತಿ ನೌಕರರಿಗೂ ಕೊಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈಗಾಗಲೇ ರಾಜ್ಯದಾದ್ಯಂತ ಎಲ್ಲ ಶಾಸಕರ ಮನೆಗಳ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸಲಾಗಿದೆ.

ಆದರೆ ಬೆಳಗಾವಿ ಅಧಿವೇಶನದಲ್ಲಿಈ ಕುರಿತು ಚರ್ಚಿಸುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹೀಗಾಗಿ ನಾವೆಲ್ಲ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿ 20 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ನಿರ್ಧಾರ ಕಾಯುಗೊಂಡಿದ್ದು, ಧರಣಿಯಲ್ಲಿ ಎಲ್ಲ ಗ್ರಾಮ ಪಂಚಾಯಿತಿ ನೌಕರರು ಭಾಗವಹಿಸಬೇಕು ಎಂದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಮಂತೂರ, ಸಿಐಟಿಯು ಮುಖಂಡ ಪೀರು ರಾಠೋಡ, ಗ್ರಾಮ ಪಂಚಾಯಿತಿ ನೌಕರರಾದ ಪ್ರಕಾಶ ನರೇಗಲ್ಲ, ಮುದುಕಪ್ಪ ದೊಣ್ಣೆಗುಡ್ಡ, ಸಿಕಂದರ್ ಬಾಗವಾನ, ಈರಣ್ಣ ಬಳಿಗೇರ, ಮಹಾಂತೇಶ ಕೋಮಾರ, ಮಲ್ಲೇಶ ಉಪ್ಪಾರ ಸೇರಿದಂತೆ 13 ಗ್ರಾಮ ಪಂಚಾಯ್ತಿಗಳ ಕರ ವಸಲಿಗಾರರು, ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು, ನೀರುಗಂಟಿಗಳು, ಸ್ವಚ್ಛತಾಗಾರರು, ಸಿಪಾಯಿಗಳು ಇದ್ದರು.

ಇದನ್ನೂ ನೋಡಿ : ಅಗತ್ಯ ಊಟ ಕೊಟ್ಟು, ಆರೋಗ್ಯ ಕಾಪಾಡುವುದು ಸರ್ಕಾರದ ಕರ್ತವ್ಯ Janashakthi Media

 

Donate Janashakthi Media

Leave a Reply

Your email address will not be published. Required fields are marked *