ಆನೇಕಲ್ : ಮಣ್ಣು ಕುಸಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲೂಕಿನ ದೊಮ್ಮಸಂದ್ರ ಸಮೀಪ ವರ್ತೂರು ರಸ್ತೆಯಲ್ಲಿರುವ ಮನಸ್ಕಂದ ಬಹುಮಹಡಿ ಅಪಾರ್ಟ್ಮೆಂಟ್ ಕಾಮಗಾರಿ ಸ್ಥಳದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಮೂಲತಃ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮಣಿಯತಹಳ್ಳಿಯ ನಲ್ಲಂಪಲ್ಲಿ ಗ್ರಾಮದ ನಿವಾಸಿ ಚಿದಂಬರಂ (45) ಮೃತ ಕಾರ್ಮಿಕ. ಅಪಾರ್ಟ್ಮೆಂಟ್ನ ಒಳಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ, ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ, ಏಕಾಏಕಿ ಮಣ್ಣು ಕುಸಿದು ಚಿದಂಬರಂ ಮೇಲೆ ಬಿದ್ದಿದೆ. ಪರಿಣಾಮ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವರ್ತೂರು ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಮಣ್ಣಿನಡಿ ಹೂತುಹೋಗಿದ್ದ ಕಾರ್ಮಿಕನ ಶವವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು.
ಇದನ್ನೂ ಓದಿ : ಬೆಂಗಳೂರು |ಉದ್ಯೋಗ ಹಕ್ಕು ಮತ್ತು ಒಕ್ಕೂಟ ವ್ಯವಸ್ಥೆ ಮೇಲೆ VB GRAM ಮಸೂದೆಗೆ ಡಿವೈಎಫ್ಐ ವಿರೋಧ
ಕಾರ್ಮಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ, ನಿರ್ಲಕ್ಷ್ಯ ವಹಿಸಿರುವುದು ಈ ಅವಘಡಕ್ಕೆ ಕಾರಣ ಘಟನೆ ನಡೆದು ಒಂದು ದಿನ ಕಳೆದರೂ ಮನಸ್ಕಂದ ಅಪಾರ್ಟ್ಮೆಂಟ್ಗೆ ಸಂಬಂಧಪಟ್ಟವರು ಈವರೆಗೂ ಆಗಮಿಸಿಲ್ಲ.ಎಂದು ಮೃತ ಚಿದಂಬರಂ ಅವರ ಸಹೋದರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತ್ಯೇಕ ಘಟನೆ, ಗುಡ್ಡ ಕುಸಿದು ಕಾರ್ಮಿಕ ಮೃತ: ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ, ಗುಡ್ಡ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಸೇವಂತಿಗುತ್ತು ಸಮೀಪ ಮಂಗಳವಾರ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕು ನಿವಾಸಿ ಬಾಳಪ್ಪ (45) ಮೃತ ಕಾರ್ಮಿಕ. ಐದು ಮಂದಿ ಕಾರ್ಮಿಕರು ಒಟ್ಟಾಗಿ ರಿಟೈನಿಂಗ್ ವಾಲ್ ಕಾಮಗಾರಿಯನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲಿ, ಅವಘಢ ಸಂಭವಿಸಿ ಬಾಳಪ್ಪ ಮಣ್ಣಿನಡಿ ಸಿಲುಕಿದ್ದರು. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಖಾಸಗಿ ಜಾಗದ ರಿಟೈನಿಂಗ್ ವಾಲ್ ಕಾಮಗಾರಿ ಇದಾಗಿದೆ. ಈ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಡ್ಡವನ್ನು ಅಗೆಯಲಾಗುತ್ತಿತ್ತು. ಇದೇ ಸಂದರ್ಭ ಗಾರೆ ಹಿಡಿದುಕೊಂಡು ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಬಾಳಪ್ಪ ಮೇಲೆ ಏಕಾಏಕಿ ಗುಡ್ಡ ಕುಸಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಮಾಹಿತಿ ತಿಳಿದು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ನೋಡಿ : ಕೊಂದವರು ಯಾರೆಂದು ಬಹಿರಂಗವಾಗಲಿ ; ಅಭಿಯಾನದ ಅಭಿಮತ Janashakthi Media