ಬೆಳಗಾವಿ : ಮೇವು ಸಾಕಾಣಿಕೆಗೆ ರೈತರಿಗೆ ನೆರವಾಗಲು, ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ಹೆಚ್ಚು ಖರ್ಚುಗಳು ಆಗುತ್ತವೆ. ಮೇವಿನ ಹಿಂಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಪ್ರತಿಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನವನ್ನು ಹಿಂದೆ ನೀಡಲಾಗುತ್ತಿತ್ತು. ಅದನ್ನೀಗ ಈ ವರ್ಷದ ಅವಧಿಯಲ್ಲೇ 7 ರೂಪಾಯಿಗೆ ಹೆಚ್ಚಿಸುತ್ತಿದ್ದೇವೆ ಎಂದರು.
ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು | ಶೀಘ್ರ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ಸಿಪಿಐ(ಎಂ) ಆಗ್ರಹ
ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು.
ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.
ಇದನ್ನೂ ನೋಡಿ : ಧರ್ಮಸ್ಥಳ ನಿಗೂಢಗಳು | ಚಿನ್ನಯ್ಯನಿಗೆ ಜಾಮೀನು! ಸತ್ಯ ಹೇಳಿದ್ದನಾ ಚಿನ್ನಯ್ಯ? Janashakthi Media
