ಸಂಪೂರ್ಣ ಅವಧಿಗೆ ನಾನೇ ಸಿಎಂ ಎಂದು ಹೇಳಿದಮೇಲೆ ಮತ್ತೆ ಚರ್ಚೆ ಅಗತ್ಯವಿಲ್ಲ: ಸಿದ್ದರಾಮಯ್ಯ

ಮೈಸೂರು: ಸಂಪೂರ್ಣ ಅವಧಿಗೆ ನಾನೇ ಸಿಎಂ ಎಂದು ವಿಧಾನಸಭೆಯಲ್ಲಿ ಹೇಳಿದ ಮೇಲೂ ಮತ್ತೆ ಚರ್ಚಿಸುವ ಅಗತ್ಯವಿಲ್ಲ ಎಂದು ನಗರದಲ್ಲಿ ಡಿಸೆಂಬರ್‌ 23ರಂದು ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಅವರು, ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೇ ತೀರ್ಮಾನಿಸಬೇಕು. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ. ನಾನು ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಾವು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು ಎಂದರು.

ಇದನ್ನೂ ಓದಿ: ಬೆಂಗಳೂರು | ಡಿಸೆಂಬರ್ 23ರಿಂದ 28ರವರೆಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ವರ್ಣ ಚಿತ್ರಗಳ ಸ್ವರ ಮೇಳ

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಒಪ್ಪಬೇಕಾದ ವಿಚಾರ. ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವೇ ಇಲ್ಲ. ಸಮಸ್ಯೆಗಳೇನಿದ್ದರೂ ಅದನ್ನು ಹೈಕಮಾಂಡ್ ಬಗೆಹರಿಸುತ್ತದೆ ಎಂದು ಹೇಳಿದರು.

ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದಲ್ಲೇ ಹೆಚ್ಚಾಗಿ ಚರ್ಚೆಯಾಗುತ್ತಿದೆ. ಆ ವಿಷಯದಲ್ಲಿ ಇಷ್ಟೊಂದು ಪ್ರಶ್ನಿಸುವ ಅಗತ್ಯವೇನಿದೆ? ವಿಧಾನಸಭೆಯಲ್ಲಿ ಹೇಳಿದ ಮೇಲೂ ಮತ್ತೆ ಚರ್ಚಿಸುವ ಅಗತ್ಯವಿಲ್ಲ. ಅಲ್ಲದೇ ಸಂಕ್ರಾಂತಿಗೆ ಕ್ರಾಂತಿಯೂ ಇಲ್ಲ, ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಪುನರುಚ್ಚರಿಸಿದರು.

ಇದನ್ನೂ ನೋಡಿ: ₹ 36 ಸಾವಿರ ವೇತನಕ್ಕೆ ಆಗ್ರಹ: ಗ್ರಾ.ಪಂ. ನೌಕರರ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *