ಮರ್ಯಾದೆಗೇಡು ಹತ್ಯೆ ಖಂಡಿಸಿ SFI, DYFI, DYS ಸಂಘಟನೆಗಳು ಪ್ರತಿಭಟನೆ

ಹುಬ್ಬಳ್ಳಿ: ತಾಲೂಕಿನ ಇನಾರಂ ವೀರಪುರದಲ್ಲಿ ಗರ್ಭಿಣಿ ಯುವತಿ ಮಾನ್ಯಾ ಪಾಟೀಲ ಮರ್ಯಾದೆಗೇಡು ಹತ್ಯೆಯನ್ನು ಖಂಡಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು SFI, DYFI, DYS ಸಂಘಟನೆಗಳ ನೇತೃತ್ವದಲ್ಲಿ ಡಿಸೆಂಬರ್‌ 24 ರಂದು ತೋರಣಗಲ್ಲು ಗ್ರಾಮ ನಾಡಕರ್ಯಲಯ ಮುಂದೆ ಪ್ರತಿಭಟಸಿ, ಗ್ರೇಡ್ 2 ಅಧಿಕಾರಿಯಾದ ಮಂಜುಳು ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಕೊಡಲಾಯಿತು..

ಈ ಸಂದರ್ಭದಲ್ಲಿ SFI ನ ರಾಜ್ಯ ಸಮಿತಿ ಸದ್ಯಸರದಾ ಶಿವರೆಡ್ಡಿ ಮಾತನಾಡಿ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ಅನ್ಯ ಜಾತಿ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದಕ್ಕೆ ಏಳು ತಿಂಗಳು ಗರ್ಭಿಣಿಯಾಗಿದ್ದ ಮಾನ್ಯಾ ಪಾಟೀಲ ಮೇಲೆ ಸ್ವತಃ ತಂದೆ ಹಾಗೂ ಕುಟುಂಬಸ್ಥರು ನಡೆಸಿದ್ದ ಮರ್ಯಾದೆಗೇಡು ಭೀಕರ ಹತ್ಯೆಯು ನಾಗರೀಕ ಸಮಾಜಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ಅಮಾನವೀಯವಾಗಿ ಹತ್ಯೆ ಮಾಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ), ಭಾರತ ವಿದ್ಯಾರ್ಥಿ ಫೆಡರೇಷನ್ ಮತ್ತು ದಲಿತ ಯುವಕರ ಸಂಘ ತೀವ್ರವಾಗಿ ಖಂಡಿಸುತ್ತವೆ.

ದಲಿತ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಮಾನ್ಯಾ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಮದುವೆಯಾಗಿ ಊರಿಗೆ ಬಂದಿದ್ದ ಮಾನ್ಯಾಳನ್ನು ಆಕೆಯ ಹೆತ್ತ ತಂದೆ ಮತ್ತು ಕುಟುಂಬಸ್ಥರು ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದಿರುವ ಕ್ರೂರ ಘಟನೆಯನ್ನು ಮಾನವೀಯ ನಾಗರೀಕ ಸಮಾಜ ಸಹಿಸುವುದಿಲ್ಲ.

ಇದನ್ನೂ ಓದಿ: ಕವಿತೆ | ಮನುಷ್ಯತ್ವ ಉಳಿಯಲಿಲ್ಲ – ಸದಾಶಿವ ಸೊರಟೂರು

ಎಂಟು ಶತಮಾನಗಳ ಹಿಂದೆಯೇ ಬಸವಣ್ಣನವರು ಅಂತರಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದ್ದರು. ಸಮಾಜದಲ್ಲಿ ಇಂದಿಗೂ ಮೇಲ್ಜಾತಿಯವರ ಅಟ್ಟಹಾಸ, ಜಾತಿ ತಾರತಮ್ಯ, ಜಾತಿ ಧ್ವೇಷ, ಅಸ್ಪೃಷ್ಯತೆ, ದಲಿತರನ್ನು ಒಪ್ಪಿಕೊಳ್ಳಲಾಗದಂತ ಮನೋಸ್ಥಿತಿ ಆಳವಾಗಿದೆ ಎಂಬುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಗರ್ಭೀಣಿಯಾದ ತನ್ನ ಮಗಳನ್ನೆ ಅಮಾನುಷವಾಗಿ ತಂದೆಯೇ ಕೊಲ್ಲುವ ಜಾತಿ ಪ್ರತಿಷ್ಠೆಯು ಘನ ಘೋರವಾಗಿದೆ. ಈ ಜಾತಿ ತಾರತಮ್ಯ, ಜಾತಿ ಧ್ವೇಷ, ಅಸ್ಪೃಷ್ಯತೆ ನಿರ್ಭೀಜಗೊಳಿಸದೇ ಸಮಾಜದ ಬೆಳವಣಿಗೆ, ಸಾಮರಸ್ಯ ತರಲು ಸಾಧ್ಯವಿಲ್ಲ ಎಂದು ಹೇಳಿದರು.

ಅದೇ ರೀತಿ DYFI ನ ಜಿಲ್ಲಾ ಕಾರ್ಯದರ್ಶಿ ಸ್ವಾಮಿ ಮಾತನಾಡಿ ಮೃತ ಯುವತಿ ಮಾನ್ಯ ದೊಡ್ಡಮನಿ ಹಾಗೂ ಆಕೆಯ ಪತಿ ವಿವೇಕಾನಂದ ಪ್ರಾಪ್ತವಯಸ್ಕರು ಮಾತ್ರವಲ್ಲ ಉತ್ತಮ ಶಿಕ್ಷಣ ಪಡೆಯುತ್ತಾ ಉತ್ತಮ ಭವಿಷ್ಯದ ಕನಸು ಕಾಣುತ್ತಾ ಹೊಸ ಬದುಕು ಕಟ್ಟಿಕೊಂಡಿದ್ದರು. ಆದರೆ ಜಾತಿಯ ವರ್ತುಲದಲ್ಲಿ ಸಿಕ್ಕಿ ಹಾಕಿಕೊಂಡ ಮೃತ ಮಾನ್ಯಳ ತಂದೆ ಮನೆಯವರು ಮಗಳು ದಲಿತ ಯುವಕನನ್ನು ಮದುವೆಯಾದ ಒಂದು ನೆಪಮಾಡಿ ಅಮಾನುಷವಾಗಿ ಹತ್ಯೆ ಮಾಡಿರುವುದು ಜಾತಿ ಶ್ರೇಷ್ಠತೆಯ ವ್ಯಸನಕ್ಕೆ ಜಗತ್ತು ನೋಡುವ ಮುಂಚೆಯೆ ಗರ್ಭದಲ್ಲಿರುವ ಶಿಶುವನ್ನು ಕೂಡ ಹತ್ಯೆಗೈದಿರುವುದನ್ನು ಸಹಿಸುವುದಾದರೂ ಹೇಗೆ?

ಮಾರ್ಯದೆ ಹತ್ಯೆ ನಡೆಸುವ ಎಲ್ಲರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕುಟುಂಬಕ್ಕಿರುವ ಆತಂಕದಂತೆ ಮಾನ್ಯಾಳ ಪತಿ ವೀವೇಕಾನಂದ ದೊಡ್ಡಮನಿ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಬೇಕೆಂದು ಅಗ್ರಹ ಮಾಡಿದರು.

DYFI ನ ಗ್ರಾಮ ಘಟಕದ ಕಾರ್ಯದರ್ಶಿ ಲೋಕೇಶ್ ಮಾತನಾಡಿ ಸರ್ಕಾರ ಅಂತರಜಾತಿ ವಿವಾಹವಾಗುವ ಎಲ್ಲ ಯುವಕ ಯುವತಿಯರಿಗೆ ಸೂಕ್ತ ಕಾನೂನು ರಕ್ಷಣೆ ನೀಡಬೇಕು. ಅವರಿಗೆ ಸಾಮಾಜಿಕವಾಗಿ ಆರ್ಥಿಕ ಬಲ ತುಂಬಲು ಪ್ರೋತ್ಸಾಹ ಧನ ಹೆಚ್ಚಳಗೊಳಿಸಬೇಕು ಹಾಗೂ ಮೀಸಲಾತಿ ಸೌಲಭ್ಯ ಒದಗಿಸುವುದು ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಜಾರಿಗೊಳಿಸಬೇಕು.

ಮುಂದೆ ಈ ರೀತಿ ಘಟನೆಗಳು ನಡೆಯದಂತೆ ಈಗಾಗಲೇ ಅವಮರ್ಯಾದಾ ಹತ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ‌ಕೋರ್ಟ್ ಹಲವು ಮಹತ್ವದ ಆದೇಶಗಳನ್ನು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ದೇಶದ ಸರ್ವೊಚ್ಛ ನ್ಯಾಯಾಲಯದ ಆದೇಶಗಳನ್ನು ಬದ್ದತೆಯಿಂದ ಪಾಲಿಸುವ ಮೂಲಕ ಸಮಾಜದಲ್ಲಿ ಮರ್ಯಾದೆಗೇಡು ಹತ್ಯೆಯ ವಿರುದ್ದ ಕಠಿಣ ಕಾನೂನು ಜಾರಿಗೆ ತರಬೇಕೆಂದು ಹೇಳಿದರು

DYFI ನ ಗ್ರಾಮ ಘಟಕದ ಸಹಕಾರ್ಯದರ್ಶಿ ಅಕ್ಷಯ್ ಕುಮಾರ್ ಮಾತನಾಡಿ ಮರ್ಯಾದಾ ಹತ್ಯೆಗಳ ವಿರುದ್ಧ ಜನಸಮುದಾಯಗಳನ್ನ ಸಂವೇಧನಾಶೀಲಗೊಳಿಸಲು ಸರ್ಕಾರ ಮುಂದಾಗಬೇಕು. ಅವಮರ್ಯಾದಾ ಹತ್ಯೆಗಳನ್ನ ಪ್ರೊತ್ಸಾಹಿಸುವ, ಸಹಕರಿಸುವ, ಸಹಾಯ ಮಾಡುವವರ ವಿರುದ್ಧವು ಕ್ರಮ ಕೈಗೊಳ್ಳಬೇಕು. ಯಾವ ಜಿಲ್ಲೆಯಲ್ಲಿ ಹೆಚ್ಚು ಅವಮರ್ಯಾದಾ ಹತ್ಯೆಗಳು ಮತ್ತೆ ಮತ್ತೆ ಮರಕಳಿಸುತ್ತಿದೆಯೊ ಆ ಜಿಲ್ಲೆಯ ಜಿಲ್ಲಾಡಳಿತ ವಿಶೇಷ ಮುತುವರ್ಜಿ ವಹಿಸಿ ಜನಜಾಗೃತಿ ಕಾರ್ಯಕ್ರಮಗಳನ್ನ ಸಂಘಟಿಸಬೇಕೆಂದು ಹೇಳಿದರು

ಮಹಿಳೆಯರ ಮೇಲಾಗುವ ಎಲ್ಲ ತರಹದ ದೌರ್ಜನ್ಯಗಳನ್ನು ತಡೆಗಟ್ಟಲು ನ್ಯಾ. ಜಿ.ಎಸ್ ವರ್ಮಾ ಸಮಿತಿಯ ಹಾಗೂ ಉಗ್ರಪ್ಪ ಸಮಿತಿಯ ಮಹಿಳಾ ಪರ ಕಾನೂನು ಶಿಫಾರಸ್ಸುಗಳನ್ನು ತ್ವರಿತವಾಗಿ ಹಾಗೂ ಸಮರ್ಪಕವಾಗಿ ಜಾರಿಗೊಳಿಸಬೇಕೆಂದು SFI, DYFI, DYS ಸಂಘಟನೆಗಳು ಆಗ್ರಹಿಸುತ್ತೇವೆ.

ಈ ಸಂದರ್ಭದಲ್ಲಿ DYFI ನ ಜಿಲ್ಲಾ ಕಾರ್ಯದರ್ಶಿ ಯಾದ ಸ್ವಾಮಿ, SFI ನ ರಾಜ್ಯ ಸಮಿತಿ ಸದ್ಯಸರದಾ ಶಿವರೆಡ್ಡಿ, DYFI ನ ಘಟಕದ ಕಾರ್ಯದರ್ಶಿ ಲೋಕೇಶ್, DYFI ಘಟಕದ ಸಹಾ ಕಾರ್ಯದರ್ಶಿ ಅಕ್ಷಯ ಕುಮಾರ್, SFI ಕಾಲೇಜ್ ಘಟಕದ ಗುಣಶೇಖರ್, DYS ಮುಖಂಡರಾಗಳಾದ ವೀರೇಶ್, ಹೊನ್ನರಪ್ಪ, ಕನಕ ಮೂರ್ತಿ, ಶಂಕರ್, SFI ಮುಖಂಡರಾಗಳಾದ ಮಲ್ಲೇಶ್, ಅಭಿಷೇಕ್, ಪ್ರಸಾದ್ ಹಾಗೂ ಇತರರು ಭಾಗವಹಿಸಿದ್ದರು.

ಇದನ್ನೂ ನೋಡಿ: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಸ್ಥಿತಿಗತಿಯೇನು ಸಚಿವರೇ? Janashakthi Media

Donate Janashakthi Media

Leave a Reply

Your email address will not be published. Required fields are marked *