ಬೆಂಗಳೂರು | ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ: ದೇವೇಗೌಡ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ  ಮತ್ತು ‘ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆಗಳಲ್ಲಿ ಬಿಜೆಪಿ ಜತೆಗೆ ಹೊಂದಾಣಿಕೆ ಕಷ್ಟವಾಗಲಿದೆ. ಅಲ್ಲೆಲ್ಲಾ ಜೆಡಿಎಸ್‌ ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ’ ಎಂದು ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪರಿಸ್ಥಿತಿ ಭಿನ್ನವಾಗಿದೆ. ಅಲ್ಲೆಲ್ಲಾ ಪಕ್ಷದ ಸಂಘಟನೆ ಬಲವಾಗಿದ್ದು, ಸ್ವತಂತ್ರವಾಗಿಯೇ ಸ್ಪರ್ಧಿಸಬೇಕಾಗುತ್ತದೆ. ಹೀಗಾಗಿ ಆ ಹಂತದ ಚುನಾವಣೆಗಳಲ್ಲಿ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದು ಕಷ್ಟ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ : ಕೇರಳ | ಕರಡು ಮತದಾರರ ಪಟ್ಟಿಯಿಂದ 24 ಲಕ್ಷ ಮತದಾರರ ಹೆಸರು ರದ್ದು

‘ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನಪರಿಷತ್ತುಗಳಿಗೆ ನಡೆಯುವ ಚುನಾವಣೆಗಳಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಹೊಂದಾಣಿಕೆಯಲ್ಲಿ ಸ್ಪರ್ಧಿಸಲಿವೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರ ಜತೆ ಮಾತನಾಡಲು ಸಾಧ್ಯವೇ? ಈ ವಿಚಾರದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ತಮ್ಮ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾವೂ ನಮ್ಮ ಸ್ವಂತ ಬಲದಲ್ಲಿಯೇ ಚುನಾವಣೆ ಎದುರಿಸುತ್ತೇವೆ. ಕೇರಳದಲ್ಲಿ ಎಡಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಳ್ಳುತ್ತೇವೆ’ ಎಂದು ವಿವರಿಸಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಮುಸ್ಲಿಮರಿಗೆ ಮೀಸಲಾತಿ ನೀಡಿದವರು ಯಾರು? ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದವರು ಯಾರು? ನಿಜಕ್ಕೂ ಅಹಿಂದ ನಾಯಕರು ಆಗಿದ್ದಿದ್ದರೆ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸಲು ಕೋಲಾರ, ಬಾದಾಮಿ ಎಂದು ವರ್ಷಗಳ ಕಾಲ ಕ್ಷೇತ್ರ ಹುಡುಕಬೇಕಿತ್ತೇ’ ಎಂದರು.

ಇದನ್ನೂ ನೋಡಿ : ಮಕ್ಕಳ ಸಾಹಿತ್ಯದ ಕೋಲ್ಮಿಂಚು ತಮ್ಮಣ್ಣ ಬೀಗಾರ ಜೊತೆ ಮಾತುಕತೆ Janashakthi Media

 

Donate Janashakthi Media

Leave a Reply

Your email address will not be published. Required fields are marked *