ಬೀದರ್ | ಚೆಕ್ ಬೌನ್ಸ್ ಪ್ರಕರಣ : ಶಾಸಕ ಶರಣು ಸಲಗರ ವಿರುದ್ಧ ಎಫ್‌ಐಆರ್ ದಾಖಲು

ಬೀದರ್: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದೆ.

ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಸಕ ಶಸರು ಸಲಗರ ವಿರುದ್ಧ ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರು | ಕೋಗಿಲು‌ ಲೇ ಔಟ್ ಸ್ಲಂ ಮನೆಗಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ – ಎ.ಎ.‌ರಹೀಮ್‌

ಹಣ ಪಡೆದ ವೇಳೆ ಶಾಸಕರು ಭದ್ರತೆಗಾಗಿ ತನ್ನ ಬಳಿ ಇದ್ದ ಖಾಲಿ ಚೆಕ್ ನೀಡಿದ್ದರು. ವಿಧಾನಸಭಾ ಚುನಾವಣೆ ವೇಳೆ ಶರಣು ಸಲಗರ, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಅವರಿಂದ 99 ಲಕ್ಷ ರೂಪಾಯಿ ಹಣ ಪಡೆದಿದ್ದರು. ನಿಗದಿತ ಅವಧಿಯಲ್ಲಿ ಶರಣು ಸಲಗರ ಹಣ ವಾಪಸ್ ಕೊಟ್ಟಿಲ್ಲ. ಇದರಿಂದ ಉದ್ಯಮಿ ಚೆಕ್ ನ್ನು ಬ್ಯಾಂಕ್ ಗೆ ಸಲ್ಲಿಸಿದ್ದಾರೆ. ಖಾತೆಯಲ್ಲಿ ಹಣವಿಲ್ಲದ ಕಾರಣ ಚೆಕ್ ಬೌನ್ಸ್ ಆಗಿದೆ.

ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಉದ್ಯಮಿ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಬಸವ ಕಲ್ಯಾಣ ಠಾಣೆಯಲ್ಲು ದೂರು ನೀಡಿದ್ದಾರೆ. ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ನೋಡಿ : ಮಕ್ಕಳ ಸಾಹಿತ್ಯದ ಕೋಲ್ಮಿಂಚು ತಮ್ಮಣ್ಣ ಬೀಗಾರ ಜೊತೆ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *