ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಪ್ರತಿಭಟನೆ

Please follow and like us:
ಬೆಂಗಳೂರು: ಕನ್ನಡಪರ ಸಂಘಟನೆಗಳು, ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಆವರಣದಲ್ಲಿ ಜನವರಿ 5ರಂದು ಭಾರಿ ಪ್ರತಿಭಟನೆ ನಡೆಸಿದವು.

ಪರಿಣಾಮವಾಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಇಂದು ನಡೆಯಬೇಕಿದ್ದ ಇಂಟರ್ನಲ್ ಪರೀಕ್ಷೆ ಮುಂದೂಡಿಕೆಯಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬವರನ್ನು ಕೆಲಸದಿಂದ ವಜಾಗೊಳಿಸಿದೆ.

ಇದನ್ನೂ ಓದಿ: ಹೊಸಪೇಟೆ | ಜ.19ರಿಂದ ಧರಣಿ: ದೇವದಾಸಿಯರ ವಿಮೋಚನಾ ಸಂಘ

ಕನ್ನಡ ಮಾತನಾಡಿದ ವಾರ್ಡನ್ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ‘ಕರ್ನಾಟಕದ ಖಾಸಗಿ ಕಾಲೇಜುಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಿಲ್ಲಬೇಕು. ಉಪನ್ಯಾಸಕರ ಮೇಲಿನ ದಬ್ಬಾಳಿಕೆ ನಿಲ್ಲಬೇಕು’ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಇದನ್ನೂ ನೋಡಿ: ಬಿಗ್ ಡಿಬೇಟ್ : ಕೋಗಿಲು ಪ್ರಕರಣ | ವಾಸವಿದ್ದವರು ಯಾರು? ಹೊರ ರಾಜ್ಯದವರೇ? ಹೊರ ದೇಶದವರೇ?Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *