ಬೆಂಗಳೂರು: ಶಾಸಕ ಜನಾರ್ಧನ ರೆಡ್ಡಿ ರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿವಾಸದ ಮುಂದೆ ಏಕಾಏಕಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದಲ್ಲಿ ಜನವರಿ 18ರಂದು ನಡೆದಿದೆ. ಬಳ್ಳಾರಿ
ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ ಖಂಡಿಸಿ ನಿನ್ನೆ ನಗರದಲ್ಲಿ ಬಿಜೆಪಿ ನಾಯಕರು ಬೃಹತ್ ಸಮಾವೇಶ ನಡೆಸಿದ್ದರು. ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಶಾಸಕ ಜನಾರ್ಧನ ರೆಡ್ಡಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು.
ಇದನ್ನೂ ಓದಿ: ಡಿಸೆಂಬರ್ನಲ್ಲಿ ನಿರುದ್ಯೋಗ ಪ್ರಮಾಣ ಶೇ. 4.8ಕ್ಕೆ ಏರಿಕೆ, ನಗರ ಪ್ರದೇಶಗಳಲ್ಲಿ ಅತಿ ಹೆಚ್ಚು ಹಾನಿ
ಬಳ್ಳಾರಿ ಕಾಂಗ್ರೆಸ್ ನಾಯಕರು ನನ್ನನ್ನು ಟಾರ್ಗೆಟ್ ಮಾಡಿ ಗುಂಡಿನ ದಾಳಿ ನಡೆಸಿದರೂ ನನಗೆ ರಕ್ಷಣೆ ನೀಡಲು ಆಗಿಲ್ಲ. ನೀನ್ಯಾವ ರೀತಿ ಡಿಸಿಎಂ? ಡಿಸಿಎಂ ಆಗಿ ಏನು ಕಿಸಿದಿದ್ದೀಯಾ? ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಜನಾರ್ಧನ ರೆಡ್ಡಿಯ ಪದಬಳಕೆಗೆ ಸಿಡಿದೆದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇಂದು ಜನಾರ್ಧನ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ನೋಡಿ: ಒಳ್ಳೆಯ ದಿನಗಳು ಏನಾದವು? ಆರ್ಥಿಕ ಸುಧಾರಣೆ ಭಾರತದ್ದೋ.., ಬಿಜೆಪಿಯದ್ದೋ!?? Janashakthi Media
