ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಚಿವ ರಹೀಂ ಖಾನ್

ಕೆಜಿಎಫ್‌: ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸಬಾರದು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಫೆಬ್ರವರಿ 9ರಂದು ನಗರಸಭೆ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಎಚ್ಚರಿಕೆ ನೀಡಿದರು. ನಿರ್ಲಕ್ಷ್ಯ

ರಾಜ್ಯದಲ್ಲಿ ಮಳೆ ಅಭಾವವಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ನೀರಿನ ಸಮಸ್ಯೆ ತೀವ್ರವಾಗಬಹುದಾದ ವಾರ್ಡ್‍ಗಳನ್ನು ಗುರುತಿಸಿ, ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ನೀರಿನ ಮೂಲಗಳಿಲ್ಲದ ಪ್ರದೇಶಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಬೇಕು. ಟ್ಯಾಂಕರ್‌ಗಳ ಮೂಲಕ ಸಮರ್ಪಕವಾಗಿ ನೀರು ಪೂರೈಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: ನವದೆಹಲಿ | ನ್ಯಾಯಾಲಯದಲ್ಲಿ ವಕೀಲನಿಗೆ ದೈಹಿಕ ಹಲ್ಲೆ : “ಗುಂಡಾ ರಾಜ್” ಒಪ್ಪಲಾಗದು ಎಂದ ಸಿಜೇಐ

ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳು, ಅನುದಾನದ ಬಳಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಮುರಳೀಧರ, ಪೌರಾಡಳಿತ ನಿರ್ದೇಶನಾಲಯದ ಬಸವರಾಜು, ಜಂಟಿ ನಿರ್ದೇಶಕ ಕೃಷ್ಣಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಶ್ರೀನಿವಾಸನ್‌, ತಹಶೀಲ್ದಾರ್ ಭರತ್ ಹಾಗೂ ವಿವಿಧ ನಗರಸಭೆಗಳ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ನೋಡಿ: ಸಿದ್ದಿ, ಕುಣಬಿ ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ವೈಶಿಷ್ಟ್ಯತೆಯ ನೃತ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *