ಬೆಂಗಳೂರು: ನಟ ಸಾಧು ಕೋಕಿಲ ಹಾಗೂ ಮಂಡ್ಯ ರಮೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಕೇಸನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆ ಮೂಲಕ ಸಾಧು ಕೋಕಿಲ ಹಾಗೂ ಮಂಡ್ಯ ರಮೇಶ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಈ ಕುರಿತಂತೆ ನ್ಯಾಯಮೂರ್ತಿ ಎಂ.ಜಿ ಉಮಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ಮಾಡಿದೆ. ಮೈಸೂರಿನ ಬ್ಯೂಟಿ ಪಾರ್ಲರ್ ನ ಮಹಿಳೆಯೊಬ್ಬರಿಂದ ಈ ಆರೋಪ ಕೇಳಿ ಬಂದಿತ್ತು.
ಇದನ್ನೂ ಓದಿ: ಜಲಾಶಯ ಮಟ್ಟ ಎತ್ತರಿಸಿ, ನೀರಾವರಿ ಕ್ಷೇತ್ರ ವಿಸ್ತರಿಸಲು ಆಗ್ರಹ; ರೈತರು ಪ್ರತಿಭಟನೆ
ತನಿಖೆ ನಡೆಸಿದ್ದಂತ ಮೈಸೂರಿನ ಸರಸ್ವತಿ ಪುರಂ ಪೊಲೀಸರು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯವೆಂದು ಆರೋಪ ಇದಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯವೆಂದು ಆರೋಪವಿತ್ತು. ಆರೋಪ ಪಟ್ಟಿ ರದ್ದುಕೋರಿ ಸಾಧು ಕೋಕಿಲ, ಮಂಡ್ಯ ರಮೇಶ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಎಫ್‌ಐಆರ್ ನಲ್ಲಿ ಹೆಸರಿಲ್ಲ, ಆರೋಪಕ್ಕೆ ಸಾಕ್ಷ್ಯಗಳಿಲ್ಲವೆಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹೆಚ್.ಎಸ್ ಚಂದ್ರಮೌಳಿ ವಾದಿಸಿದ್ದರು.
ವಾದ – ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ಜಿ ಉಮಾ ಅವರನ್ನೊಳಗೊಂಡ ನ್ಯಾಯಪೀಠವು, ಸಾಕ್ಷ್ಯಾಧಾರಗಳ ಕೊರತೆಯ ಹಿನ್ನಲೆಯಲ್ಲಿ ಪ್ರಕರಣ ರದ್ದುಪಡಿಸಿ ಆದೇಶಿಸಿದ್ದಾರೆ. ಆ ಮೂಲಕ ನಟ ಸಾಧು ಕೋಕಿಲ, ಮಂಡ್ಯ ರಮೇಶ್ ಗೆ ಬಿಗ್ ರಿಲೀಫ್ ನೀಡಿದ್ದಾರೆ.
ಇದನ್ನೂ ನೋಡಿ: “ಮ್ಯಾಗ್ನೆಟ್ ಯೋಜನೆಗೆ ವಿರೋಧ – ಆಂದೋಲನವಾಗುತ್ತಿರುವ ಸರ್ಕಾರಿ ಶಾಲೆ ಉಳಿಸಿ ಹೋರಾಟ” Janashakthi Media
