ಗಜೇಂದ್ರಗಡ |ಶ್ರೀ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಮ್ಮೇಳನಕ್ಕೆ ಅನುಮತಿ ಎಸ್ ಎಫ್ ಐ ಖಂಡನೆ

ಗಜೇಂದ್ರಗಡ :  ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಶ್ರೀ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 14 ಫೆಭ್ರವರಿ 2026 ರಂದು ಹಿಂದೂ ಸಮ್ಮೇಳನ ಹಮ್ಮಿಕೊಂಡಿದ್ದು ಇದು ಶಿಕ್ಷಣ ಸಂಸ್ಥೆಗಳ ಸಂವಿಧಾನ ಉಲ್ಲಂಘನೆ ಕಾರ್ಯಕ್ರಮವಾಗಿದೆ ಎಂದು ಎಸ್ ಎಫ್ ಐ ಜಿಲ್ಲಾ ಸಮಿತಿ ತಿವ್ರವಾಗಿ ಖಂಡಿಸಿದೆ ಎಂದು ತಿಳಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ  ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಮಾತನಾಡಿ, ಭಾರತ ಸಂವಿಧಾನವು ವಿಧಿ 28 ರಲ್ಲಿ ತಿಳಿಸಿರುವಂತೆ ವಿದ್ಯಾರ್ಥಿಗಳಿಗೆ ಜಾತ್ಯಾತೀತ ಶಿಕ್ಷಣ ನೀಡುವಂತೆ ನಿರ್ದೇಶಿಸುತ್ತದೆ ಆದರೆ ನಗರದ ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಮ್ಮೇಳನ ಹಮ್ಮಿಕೊಂಡಿದ್ದು ಇದರಲ್ಲಿ ವಿದ್ಯಾರ್ಥಿಗಳಿಗೆ ಕೋಮು ವಿಷಬೀಜ ಬಿತ್ತುವ ಸಂದೇಶವನ್ನು ನೀಡುತ್ತದೆ ಅದರಿಂದ ವಿದ್ಯಾರ್ಥಿಗಳ ಮಧ್ಯೆ ಜಾತ್ಯತೀತ ಸೌಹಾರ್ದ ಭಾವನೆಯನ್ನು ಚಿದ್ರಗೊಳಿಸುವ ಹುನ್ನಾರವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಗಜೇಂದ್ರಗಡ |ಶ್ರೀ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಮ್ಮೇಳನಕ್ಕೆ ಅನುಮತಿ ಎಸ್ ಎಫ್ ಐ ಖಂಡನೆ

ಎಸ್ ಎಫ್ ರಾಜ್ಯ ಉಪಾಧ್ಯಕ್ಷರಾದ ಗಣೇಶ್ ರಾಥೋಡ್ ಮಾತನಾಡಿ  ಕ್ರೀಡಾಂಗಣದಲ್ಲಿ ನಾಳೆ ಪ್ರಥಮ ಪಿಯುಸಿ ಅಂತಿಮ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯುತ್ತಿದ್ದರು ಕೂಡ ಶಾಲಾ ಶಿಕ್ಷಣ ಇಲಾಖೆ – ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳು ಇಂತಹ ಕೋಮು ಪ್ರಚೋದನೆಗೆ ಒಳಗಾಗುವ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಿದೆ ಇದು ಸಂವಿಧಾನ ವಿರೋಧಿ ಶಿಕ್ಷಣ ನೀತಿ ವಿರೋಧಿ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಿದೆ ಪರಿಕ್ಷೆ ಇದ್ದರು ಕೂಡ ಇತಂಹ ಸಂವಿಧಾನ ವಿರೋಧಿ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ಎಸ ಎಫ್ ಐ ನ ತಾಲೂಕ ಅಧ್ಯಕ್ಷರಾದ ಅನಿಲ್ ಆರ್ ಮಾತನಾಡಿ ಶಾಲೆಗಳು ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸುವ ಕೇಂದ್ರಗಳ ವಿನಹ ಧರ್ಮ ಬೋಧನೆಯ ಪಾಠಶಾಲೆಗಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ  ಶರಣು, ರಾಹುಲ್, ಗುರು, ಈಶ್ವರ್ ಗುಡ್ಡದೇವಲಾಪುರ, ವೀರೇಶ್, ತುಕಾರಾಂ, ಆನಂದ್ ಹಾಗೂ ಇತರರು ಹಾಜರಿದ್ದರು.

Donate Janashakthi Media

Leave a Reply

Your email address will not be published. Required fields are marked *