ಬೆಂಗಳೂರು: “ಸಾಮರ್ಥ್ಯ ಎಷ್ಟು ಸರಿ ಪ್ರೂವ್ ಮಾಡಬೇಕ್ರೀ?” ಎಂದು ಗುಡುಗಿದ ಗೃಹ ಮಂತ್ರಿ ಡಾ.ಜಿ ಪರಮೇಶ್ವರ್, ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ನಡುವೆ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನು ಕೂಡ ಇದ್ದೇನೆ ಎಂದು ಫೆಬ್ರವರಿ 25ರಂದು ಘೋಷಿಸಿದ್ದಾರೆ. ಸಿಎಂ
“ನಾನು ಎಂಟು ವರ್ಷ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೀನಿ, ನನ್ನ ಅವಧಿಯಲ್ಲಿ ಎರಡು ಸಲ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೀನಿ, ಉಪಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದೀನಿ, ಸಾಮರ್ಥ್ಯ ಇಲ್ಲದೇ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡೋಕ್ಕೆ ಆಗುತ್ತಾ. ನನ್ನ ವಿಷಯದಲ್ಲಿ ಸಾಮರ್ಥ್ಯದ ಬಗ್ಗೆ ಯಾರೂ ಪ್ರಶ್ನೆ ಮಾಡೋ ಹಂಗಿಲ್ಲ. ಐ ಹ್ಯಾವ್ ಪ್ರೂವ್ಡ್ ಬಿಯಾಂಡ್ ಡೌಟ್ ದಟ್ ಐಯಾಮ್ ಕೇಪಬಲ್.” ಎಂದು ರಾಜ್ಯ ಕಾಂಗ್ರೆಸ್ನಲ್ಲಿ ದಲಿತರು ಮುಖ್ಯ ಮಂತ್ರಿಯಾಗಬೇಕೆಂದು ಎದ್ದಿರುವ ಕೂಗಿಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ,ಮಾಧ್ಯಮಗಳ ಪ್ರತಿನಿಧಿಗಳ “ಸಾಮರ್ಥ್ಯ” ಕುರಿತ ಪ್ರಶ್ನೆಗೆ ತುಸು ಏರಿದ ದನಿಯಲ್ಲೇ ಉತ್ತರಿಸಿದರು. ಸಿಎಂ
ಪರಮೇಶ್ವರ್ ಅವರ ಈ ಹೇಳಿಕೆಯ ಮೂಲಕ ವಿದ್ಯಮಾನಗಳಿಗೆ ಕುತೂಹಲಕರ ತಿರುವು ಸಿಕ್ಕಿದೆ. ಎಂಟು ವರ್ಷದ ಅವಧಿಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ ಉಪಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ ಹೀಗಾಗಿ ಮುಖ್ಯಮಂತ್ರಿ ಹುದ್ದೆಗೆ ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಅವರು ಹೇಳಿದ್ದಾರೆ. ಸಿಎಂ
ಇದನ್ನೂ ಓದಿ: ಜಿಎಸ್ಟಿ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಯನ್ನ ಬೆದರಿಸಿ ಸುಲಿಗೆ; ಇಬ್ಬರ ಬಂಧನ
ಮುಖ್ಯಮಂತ್ರಿ ಬಗ್ಗೆಯಾಗಲಿ ಅಥವಾ ಬದಲಾವಣೆಯ ಕುರಿತಾಗಲಿ ಹಾದಿ ಬೀದಿಯಲ್ಲಿ ಚರ್ಚೆ ಮಾಡಲು ಸಾಧ್ಯವಿಲ್ಲ. ಹೆಚ್ಚೆಂದರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡಬಹುದು. ಉಳಿದಂತೆ ಹೈಕಮಾಂಡ್ ನಾಯಕರು ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ಕೆಲಸ ಮಾಡಿರುವ ಪರಮೇಶ್ವರ್ ಅವರಿಗೆ ತಕ್ಕ ಕೂಲಿ ಕೊಡಿ ಎಂದು ಮಾಜಿ ಮಂತ್ರಿ ಕೆ ಎನ್ ರಾಜಣ್ಣ ಕೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದ ಪರಂ ಯಾರಾದರೂ ನನ್ನ ಹೆಸರನ್ನು ಕೂಗಿದ ತಕ್ಷಣ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಹಾಗೆ ಕೂಗುವುದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ಆದರೆ ಸನ್ನಿವೇಶ ಮತ್ತು ಪಕ್ಷದ ತೀರ್ಮಾನ ಎಲ್ಲವನ್ನೂ ಆಧರಿಸಿರುತ್ತದೆ ಎಂದು ವಿಶ್ಲೇಷಿಸಿದರು.
ಇದರ ಹೊರತಾಗಿ ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದೇನೆ. ಈ ವಿಚಾರವಾಗಿ ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧನಾಗಿರುತ್ತೇನೆ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಯಾರೋ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಕೇವಲ ಈ ಬಗ್ಗೆ ಚರ್ಚೆ ಮಾಡಬಹುದಷ್ಟೇ. ಇದೇ ವಿಚಾರಕ್ಕಾಗಿ ನಾನು ದೆಹಲಿಗೆ ಹೋಗಬೇಕಾದ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ನೋಡಿ: ಕೆಂಪು ಪುಸ್ತಕ ದಿನ | ದುಡಿಯುವ ಜನತೆಯ ಕೈಪಿಡಿಹಾಡಿದವರು Janashakthi Media
