ನವದೆಹಲಿ: ಹಿಂದಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ತಟಸ್ಥತೆಯನ್ನು ತ್ಯಜಿಸಿ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಿದ್ದಾರೆ ಎಂದು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಸಂಸದ ಮಾಣಿಕಮ್ ಟ್ಯಾಗೋರ್ ಮಾರ್ಚ್ 9ರಂದು ಆರೋಪಿಸಿದ್ದಾರೆ. ವಿಪಕ್ಷ
ಅಲ್ಲದೆ “ವಿಪಕ್ಷದ 240 ಸಂಸದರನ್ನು” ಅಮಾನತುಗೊಳಿಸುವ ಸಂಚು ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ
ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಇಂದು ಆರಂಭವಾಗಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದಾರೆ.
“ಸ್ಪೀಕರ್ ತಟಸ್ಥವಾಗಿ ವರ್ತಿಸಬೇಕು. ಆದರೆ ಅದು ನಡೆಯುತ್ತಿಲ್ಲ. ಸ್ಪೀಕರ್ ವಿರೋಧ ಪಕ್ಷದ ಸದಸ್ಯರನ್ನು ಮಾತನಾಡಲು ಬಿಡುವುದಿಲ್ಲ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡಬೇಕು ಎಂದಿದ್ದಾರೆ.
ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸುತ್ತಾರೆ ಮತ್ತು ಮಹಿಳಾ ವಿರೋಧ ಪಕ್ಷದ ಸಂಸದರ ವಿರುದ್ಧ ಆರೋಪಗಳನ್ನು ಮಾಡುತ್ತಾರೆ. ಅವರು(ಆಡಳಿತ ಪಕ್ಷ) ವಿರೋಧ ಪಕ್ಷದ ಎಲ್ಲಾ 240 ಸಂಸದರನ್ನು ಅಮಾನತುಗೊಳಿಸಲು ಯೋಜಿಸಿದ್ದಾರೆ. ಇದರ ವಿರುದ್ಧ ನಾವು ಅವಿಶ್ವಾಸ ನಿರ್ಣಯ ತಂದಿದ್ದೇವೆ” ಎಂದರು.
ಇದನ್ನೂ ನೋಡಿ: ಗಾಂಧಿ, ನೆಹರೂ ವಿಚಾರಗಳ ಮೇಲೆ ದಾಳಿ: ಉಗ್ರಪ್ಪ ಆರೋಪJanashakthi Media
