ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ವಿಧಾನಸೌಧದಲ್ಲಿ ಮಾರ್ಚ್ 10ರಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯವಾಡಿದ್ದಾರೆ.
ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕರೂರ್ ಕಾಲ್ತುಳಿತ ಪ್ರಕರಣ: ನಟ ವಿಜಯ್ ಗೆ ಮತ್ತೆ ಸಿಬಿಐ ಸಮನ್ಸ್ ಜಾರಿ
ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್ನವರ ಹಿತದೃಷ್ಟಿಯನ್ನು ಕಾಪಾಡಬೇಕು ಎಂದು ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ಡಿಕೆ ಶಿವಕುಮಾರ್ ಕನಸಾಗಿತ್ತು..
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ ಹೆಬ್ಬಾಳ್ಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಅಲ್ಲದೆ ಇಂದಿನ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಲಿದ್ದೇವೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಸಿಎಂ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಇದನ್ನೂ ನೋಡಿ: ಭೂ ಹಕ್ಕಿನ ಹೋರಾಟದ ಧ್ವನಿ | ಮರಕುಂಬಿ ಹೋರಾಟದ ರೂವಾರಿ ನಿತ್ಯಾನಂದ ಸ್ವಾಮಿ Janashakthi Media
