ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿತ; 7 ಮಂದಿ ಕಾರ್ಮಿಕರು ಸಾವು

ಗುರುಗ್ರಾಮ: ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಬಿದ್ದು 7 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಐವರು ಗಾಯಗೊಂಡಿರುವ ಘಟನೆ ಹರ್ಯಾಣದ ಗುರುಗ್ರಾಮದ ಸಿಧ್ರಾವಲಿ ಪ್ರದೇಶದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಗೋಡೆ ಕುಸಿದು ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ.

ಇದನ್ನೂ ಓದಿ: ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜು ಸ್ಥಗಿತ; ಮಾ. 10ರಿಂದ ಹೋಟೆಲ್‌ಗಳ ಬಂದ್ ಸಾಧ್ಯತೆ

“ಕಾರ್ಮಿಕರನ್ನು ಅವಶೇಷಗಳಡಿಯಿಂದ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಮಿಕರ ಮೃತದೇಹವನ್ನು ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ: ಗೋಷ್ಠಿ – 01 | ದೇಹ ರಾಜಕಾರಣ ಮತ್ತು ಲೈಂಗಿಕ ದೌರ್ಜನ್ಯ

Donate Janashakthi Media

Leave a Reply

Your email address will not be published. Required fields are marked *